ಸಕಲೇಶಪುರ: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿಯವರ ಪತ್ನಿ ಜಿಲ್ಲಾ ಪಂಚಾಯತ್ ಸದಸ್ಯೆ ಚಂಚಲಾ ಕುಮಾರಸ್ವಾಮಿಯವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಕಳೆದ ವಾರ ಆಲೂರಿನಲ್ಲಿ ಶಾಸಕರು ಹಾಗೂ ಅವರ ಆಪ್ತ ಸಹಾಯಕ, ಗನ್ ಮ್ಯಾನ್ ಸೇರಿದಂತೆ ಒಟ್ಟು 11 ಜನರ ಗಂಟಲು ದ್ರವವನ್ನು ಪಡೆದುಕೊಂಡು ಟೆಸ್ಟಿಂಗ್ಗೆ ಕಳುಹಿಸಿಕೊಡಲಾಗಿತ್ತು. ಅದರಲ್ಲಿ ಬೆಳಗೋಡು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯೆ ಚಂಚಲ ಕುಮಾರಸ್ವಾಮಿ, ಮಗಳು ಹಾಗೂ ಕಾರಿನ ಡ್ರೈವರ್ಗೆ ಪಾಸಿಟಿವ್ ಎಂದು ವರದಿ ಬಂದಿದೆ. ಸದ್ಯ ಜಿಲ್ಲಾ ಪಂಚಾಯತ್ ಸದಸ್ಯರು ಮಂಡ್ಯ ಜಿಲ್ಲೆಯ ತಮ್ಮ ಮಗಳ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನ ಚಾಲಕ ಹಾಸನ ಜಿಲ್ಲಾ ಕೋವಿಡ್ ಚಿಕಿತ್ಸಾ ಕೇಂದ್ರದಲ್ಲಿದ್ದಾರೆ. ಸದಸ್ಯೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಶಾಸಕರು ಸೇರಿದಂತೆ ಅವರ ಎಲ್ಲಾ ಸಿಬ್ಬಂದಿ ವರ್ಗದವರು ಪ್ರತ್ಯೇಕ ಮನೆಯಲ್ಲಿ ಕ್ವಾರಂಟೈನ್ಗೆ ಒಳಗಾಗಿದ್ದಾರೆ.