ಸಕಲೇಶಪುರ:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ಖಚಿತ ಎಂದು ಕೆಪಿಸಿಸಿ ವೀಕ್ಷಕ ಮಂಜುನಾಥ್ ಹೇಳಿದರು.
ಪಟ್ಟಣದ ನಂಜಮ್ಮ ಮಹಿಳಾ ಸಮಾಜದಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಸಮಾರಂಭವನ್ನು ಆನ್ಲೈನ್ ಮೂಲಕ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ವೀಕ್ಷಕ ಮಂಜುನಾಥ್, ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ಹಾಗೂ ಸಲೀಂ ಅಹಮ್ಮದ್, ಸತೀಶ್ ಜಾರಕಿಹೊಳಿ ಹಾಗೂ ಈಶ್ವರ್ ಖಂಡ್ರೆ ಅವರು ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ ಮಾಡುತ್ತಿದ್ದಾರೆ ಎಂದರು.