ಸಕಲೇಶಪುರ :ಕೊರೊನಾ ನಿಯಂತ್ರಿಸಲು ಪಟ್ಟಣದಲ್ಲಿ ವರ್ತಕರು ಕೈಗೊಂಡಿರುವ ಸ್ವಯಂ ಪ್ರೇರಿತ ಲಾಕ್‌ಡೌನ್ ಮೊದಲ ದಿನ ಯಶಸ್ವಿಯಾಯಿತು.
ಸಕಲೇಶಪುರದಲ್ಲಿ ಸ್ವಯಂ ಪ್ರೇರಿತ ಲಾಕ್‌ಡೌನ್ ಯಶಸ್ವಿ - sakaleshpur lackdown news
ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಸಕ ಎಚ್. ಕೆ ಕುಮಾರಸ್ವಾಮಿ ಸೋಮವಾರ ಲಾಕ್‌ಡೌನ್ ಮಾಡುವ ಕುರಿತು ಪುರಭವನದಲ್ಲಿ ಅಧಿಕಾರಿಗಳ, ಜನಪ್ರತಿನಿಧಿಗಳ ಹಾಗೂ ವರ್ತಕರ ಸಭೆ ನಡೆಸಿದ್ದರು. ಸಭೆಯಲ್ಲಿ ಮುಂಜಾನೆ 7 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ತೀರ್ಮಾನಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಮಂಗಳವಾರ ವರ್ತಕರು ಸ್ವಯಂ ಪ್ರೇರಿತರಾಗಿ ಮಧ್ಯಾಹ್ನ 3 ಗಂಟೆಯ ನಂತರ ಅಂಗಡಿಗಳನ್ನು ಬಂದ್ ಮಾಡಿದ್ದರು. ಈಗಾಗಲೆ ತಾಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ಇದೇ ರೀತಿಯಲ್ಲಿ ಸ್ವಯಂ ಪ್ರೇರಿತ ಬಂದ್ ಯಶಸ್ವಿಯಾಗಿದ್ದು ಮುಂದಿನ ದಿನಗಳಲ್ಲಿ ತಾಲೂಕಿನ ಹೋಬಳಿ ಕೇಂದ್ರಗಳಲ್ಲೂ ಸಹ ಸ್ವಯಂ ಪ್ರೇರಿತ ಬಂದ್ ಮಾಡುವ ಸಾಧ್ಯತೆಯಿದೆ.