ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಯ ಮೇಲೆ ಶಿಕ್ಷಕನಿಂದ ಲೈಂಗಿಕ ಕಿರುಕುಳ; ಮನನೊಂದ ಹುಡುಗ ಆತ್ಮಹತ್ಯೆಗೆ ಶರಣು

ಸಕಲೇಶಪುರ ತಾಲ್ಲೂಕಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ, ನಿನ್ನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ದುರಂತ ನಡೆದಿದೆ.

By

Published : Sep 13, 2019, 4:56 AM IST

Updated : Sep 13, 2019, 12:04 PM IST

ವಿದ್ಯಾರ್ಥಿಯ ಮೇಲೆ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ

ಹಾಸನ :ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಗುರುವಾರ ಕೊನೆಯುಸಿರೆಳೆದಿದ್ದಾನೆ.

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಶಾಲಾ ಆಡಳಿತ ಮಂಡಳಿಗೆ ಪೋಷಕರು ದೂರು ನೀಡಿದ್ದರೂ ‌ಸಹ, ಶಿಕ್ಷಕ ಹಬೀಬ್ ತನ್ನ ಚಾಳಿ ಮುಂದುವರೆಸಿದ್ದಾನೆ .

ತೀವ್ರ ಅಸ್ವಸ್ಥನಾಗಿದ್ದ ವಿದ್ಯಾರ್ಥಿಯನ್ನ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಶಿಕ್ಷಕನ ವಿರುದ್ದ ಕ್ರಮಕ್ಕೆ ಪೋಷಕರು ದೂರು ಕೊಟ್ಟ ಮೇಲೆ ಯಸಳೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Last Updated : Sep 13, 2019, 12:04 PM IST

ABOUT THE AUTHOR

...view details