ಹಾಸನ: ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮತ್ತು ಕಾರ್ಯದರ್ಶಿ ಹಾಗೂ ಪ್ರಾಧ್ಯಾಪಕರ ಮೇಲಿನ ಮಾರಣಾಂತಿಕ ಹಲ್ಲೆ ವಿರೋಧಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಲು ಒತ್ತಾಯಿಸಿ ಹಾಗೂ ಸೂಕ್ತ ಕಾನೂನು ತನಿಖೆಗೆ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಜೆಎನ್ಯು ಹಲ್ಲೆ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ - ಹಾಸನ ಸುದ್ದಿ
ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮತ್ತು ಕಾರ್ಯದರ್ಶಿ ಹಾಗೂ ಪ್ರಾಧ್ಯಾಪಕರ ಮೇಲಿನ ಮಾರಣಾಂತಿಕ ಹಲ್ಲೆ ವಿರೋಧಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಲು ಒತ್ತಾಯಿಸಿ ಹಾಗೂ ಸೂಕ್ತ ಕಾನೂನು ತನಿಖೆಗೆ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಎಸ್ಎಫ್ಐ ಪ್ರತಿಭಟನೆ
ಎಸ್ಎಫ್ಐ ಜಿಲ್ಲಾಧ್ಯಕ್ಷೆ ಆಶಾ ಮಾತನಾಡಿ, ಜನವರಿ 5ರಂದು ರಾತ್ರಿ ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‍ನಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್‍ಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಸಂಗತಿಗಳು ಸಾಮಾಜಿಕ ಜಾಲತಾಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ವರದಿಯಾಗಿವೆ. ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿ ಮತ್ತು ಅಧ್ಯಾಪಕರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ನಾಶಪಡಿಸುವ ಈ ರೀತಿಯ ಅಮಾನುಷ ಮತ್ತು ಮಾರಣಾಂತಿಕ ಹಲ್ಲೆಯನ್ನು ನಾವು ಖಂಡಿಸುವುದಾಗಿ ಹೇಳಿದರು.