ಕರ್ನಾಟಕ

karnataka

ETV Bharat / state

ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಆಸ್ಪತ್ರೆಗೆ ದಾಖಲು - ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿ ನೆಗೆಟಿವ್ ಬಂದಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮತ್ತೆ ಸಿಟಿ ಸ್ಕ್ಯಾನಿಂಗ್ ಮಾಡಿಸಿದ್ದಾರೆ. ಈ ವೇಳೆ ವೈದ್ಯರು ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಸಲಹೆ ನೀಡಿದ ಹಿನ್ನೆಲೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

Shravanbela Gola  MLA Balakrishna has been admitted to Hospital due to illness
ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

By

Published : Nov 10, 2020, 2:32 PM IST

ಚನ್ನರಾಯಪಟ್ಟಣ:ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ 4 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಾಸಕರು ಕೊರೊನಾ ಪರೀಕ್ಷೆ ಮಾಡಿಸಿದ್ದರು. ಆದರೆ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮತ್ತೆ ಸಿಟಿ ಸ್ಕ್ಯಾನಿಂಗ್ ಮಾಡಿಸಿದ್ದಾರೆ. ಈ ವೇಳೆ ವೈದ್ಯರು ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಸಲಹೆ ನೀಡಿದ್ದರು.

ಈ ಬಗ್ಗೆ ಮಾಹಿತಿ ನೀಡಿರುವ ಶಾಸಕರು, ಕ್ಷೇತ್ರದ ಜನರಿಗೆ ತೊಂದರೆಯಾಗಬಾರದೆಂದು ಬೆಂಗಳೂರಿಗೆ ಬಂದಿರುತ್ತೇನೆ. ಆದಷ್ಟು ಬೇಗನೆ ಗುಣಮುಖನಾಗಿ ಕ್ಷೇತ್ರದ ಜನರ ಕಷ್ಟ-ಸುಖದಲ್ಲಿ ಭಾಗಿಯಾಗುತ್ತೇನೆ. ನನ್ನ ಆಪ್ತ ಸಹಾಯಕರ ದೂರವಾಣಿಗೆ ಕರೆಮಾಡಿ ನಿಮ್ಮ ಸಮಸ್ಯೆಗಳಿದ್ದರೆ ತಿಳಿಸಿ. ಪರಿಹರಿಸಲು ನಿರ್ದೇಶನ ನೀಡಿರುತ್ತೇನೆ ಎಂದಿದ್ದಾರೆ.

For All Latest Updates

TAGGED:

ABOUT THE AUTHOR

...view details