ಕರ್ನಾಟಕ

karnataka

ETV Bharat / state

ಕೊಟ್ಟ ಕುದುರೆಯನ್ನು ಏರದವನು ಶೂರನೂ ಅಲ್ಲ, ವೀರನೂ ಅಲ್ಲ: ಹೆಚ್​​ಡಿಕೆಗೆ ಸಿದ್ದು ಟಾಂಗ್​​ - ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

'ಹಾಸನದಲ್ಲಿ ಕಾಂಗ್ರೆಸ್​​ ಪಕ್ಷದ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಹಾಗಿದ್ದಲ್ಲಿ ಮಾತ್ರ ರಾಜ್ಯದಲ್ಲಿ ಈ ಬಾರಿ ನಾವು ಅಧಿಕಾರಕ್ಕೆ ಬರಲು ಸಾಧ್ಯ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

opposition leader Siddaramaiah
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

By

Published : May 30, 2022, 6:51 AM IST

ಹಾಸನ: ಕೊಟ್ಟ ಕುದುರೆಯನ್ನು ಏರದವನು ಶೂರನೂ ಅಲ್ಲ, ವೀರನೂ ಅಲ್ಲ. ಹಾಗಾಗಿದೆ ಜೆಡಿಎಸ್ ಪಕ್ಷದವರ ನಾಯಕತ್ವ ಎಂದು ಮಾಜಿ ಮುಖ್ಯಮಂತ್ರಿ ಹೆಚ್​​.ಡಿ.ಕುಮಾರಸ್ವಾಮಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್​​ ನೀಡಿದರು. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಾಂಗ್ರೆಸ್​​ ಕಚೇರಿ ಉದ್ಘಾಟನಾ ಸಮಾರಂಭದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರಲು ಸಾಧ್ಯವೇ? ಎಂದು ಪ್ರಶ್ನಿಸಿದರು.


ಹಾಸನದಲ್ಲಿ ಕಾಂಗ್ರೆಸ್​​ ಪಕ್ಷದ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಹಾಗಿದ್ದಲ್ಲಿ ಮಾತ್ರ ನಾವು ಈ ಬಾರಿ ಅಧಿಕಾರಕ್ಕೆ ಬರಲು ಸಾಧ್ಯವಿದೆ. ಮಂಡ್ಯದಲ್ಲಿ 6 ಮಂದಿ ಜೆಡಿಎಸ್ ಶಾಸಕರಿದ್ದರು. ವಿಧಾನ ಪರಿಷತ್ ಚುನಾವಣೆಯಲ್ಲಿ ದಿನೇಶ್ ಗೂಳಿಗೌಡ ಜಯಭೇರಿ ಬಾರಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮಂಡ್ಯದಲ್ಲಿಯೂ ಕಾಂಗ್ರೆಸ್​​ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಯಾರಿಗಾದರೂ ಒಂದು ಮನೆ ಕಟ್ಟಿಸಿಕೊಟ್ಟಿದ್ದಾರಾ?. ಈಗ ಚುನಾವಣೆ ಬಂತು. ಹಾಗಾಗಿ ಮನೆ ಕೊಡುತ್ತೇವೆ ಎನ್ನುತ್ತಿದ್ದಾರೆ. ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದರು, ಈಗ ಬಸವರಾಜ ಬೊಮ್ಮಾಯಿ ಬಂದಿದ್ದಾರೆ. ಬಡವರ ಮೇಲೆ ಒಬ್ಬರಿಗಾದರೂ ಕನಿಕರ ಬೇಡವೇ? ಎಂದು ಕುಟುಕಿದರು. ಬಳಿಕ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡರ ಮನೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಾಟಿಕೋಳಿ ಸಾರು, ಮುದ್ದೆ ಸವಿದರು.

ಇದನ್ನೂ ಓದಿ:ಈಶ್ವರಪ್ಪ ನಿಮ್ಮ ನಾಟಕವನ್ನುಇಡೀ ರಾಜ್ಯದ ಕುರುಬರು ಅರ್ಥ ಮಾಡಿಕೊಂಡಿದ್ದಾರೆ: ಸಿದ್ದರಾಮಯ್ಯ

ABOUT THE AUTHOR

...view details