ಹಾಸನ: ಸಿದ್ದರಾಮಯ್ಯನವರ ವ್ಯಕ್ತಿತ್ವ ತುಂಬಾ ದೊಡ್ಡದಿದೆ. ಹೀಗಿರುವಾಗ ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಿದ್ದರಾಮಯ್ಯ ವಿರುದ್ಧ ಮಾತಿನ ಮೂಲಕ ಮೌನವಾಗಿಯೇ ಕಿಡಿಕಾರಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ವಿದ್ಯಮಾನಗಳನ್ನು ಗಮನಿಸುತ್ತಿದ್ದೇನೆ. ವಾದ-ಪ್ರತಿವಾದಗಳ ಬಗ್ಗೆಯೂ ನಾನು ಗಮನ ಹರಿಸುತ್ತೇನೆ. ಸಿದ್ದರಾಮಯ್ಯನವರ ವ್ಯಕ್ತಿತ್ವ ತುಂಬಾ ದೊಡ್ಡದಿದೆ. ಅವರು ಏನು ಬೇಕಾದರೂ ಮಾತನಾಡಲಿ, ನಾನು ಅವರ ಬಗ್ಗೆ ಮಾತನಾಡುವುದಿಲ್ಲ. ಆದರೆ ತೀರ್ಪು ಕೊಡುವವರು ಜನರಲ್ಲವೇ ಎಂದರು.