ಹಾಸನ: ಸೋನಿಯಾ ಗಾಂಧಿಯನ್ನು ಮೆಚ್ಚಿಸಿದರೆ ರಾಜಕೀಯವಾಗಿ ರಾಜ್ಯದಲ್ಲಿ ಪಾರುಪತ್ಯ ಸಾಧಿಸಬಹುದು ಎಂಬ ಉದ್ದೇಶದಿಂದ ಸಿದ್ದರಾಮಯ್ಯ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರನ್ನು ಟೀಕಿಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಶನಿವಾರ ರಾತ್ರಿ ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅಂಡಬಾರ್ ನಿಕೋಬಾರ್ನಲ್ಲಿ ಶಿಕ್ಷೆ ಅನುಭವಿಸಿದ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ವೀರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವ್ಯಕ್ತಿಗಳ ಕುರಿತು ಅವಹೇಳನಕಾರಿಯಾಗಿ ಮಾತಾಡುವ ವ್ಯಕ್ತಿ ನಮ್ಮ ರಾಜ್ಯದ ಸಿಎಂ ಆಗಿದ್ದರು ಹಾಗೂ ಇದೀಗ ಪ್ರತಿಪಕ್ಷ ನಾಯಕರಾಗಿದ್ದಾರೆ ಎನ್ನುವುದು ದೊಡ್ಡ ದುರಂತ ಎಂದರು.