ಶ್ರವಣಬೆಳಗೊಳ(ಹಾಸನ): ಚಾಲಕನ ನಿರ್ಲಕ್ಷ್ಯದಿಂದ ಖಾಸಗಿ ಶಾಲಾ ಬಸ್ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ಹಾಸನ ಜಿಲ್ಲೆಯ ಶ್ರವಣಬೆಳಗೊಳದ ಅರುವನಹಳ್ಳಿ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮಂಜುನಾಥ ಎಜುಕೇಷನ್ ಟ್ರಸ್ಟ್ನ ಬಿಎಂಎಚ್ ಪಬ್ಲಿಕ್ ಶಾಲಾ ವಾಹನ ಪಲ್ಟಿಯಾಗಿದ್ದು, ಶ್ರವಣಬೆಳಗೊಳ ಹೋಬಳಿಯ ಪರಮ ಗ್ರಾಮಕ್ಕೆ ಶಾಲೆಯಿಂದ ವಿದ್ಯಾರ್ಥಿಗಳನ್ನು ಬಿಡಲು ಹೋಗುತ್ತಿದ್ದ ವೇಳೆ ಕೆರೆಯ ಸಮೀಪ ಬಸ್ ಪಲ್ಟಿಯಾಗಿತ್ತು. ಘಟನೆಯಲ್ಲಿ 6 ರಿಂದ 7 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.