ಕರ್ನಾಟಕ

karnataka

ETV Bharat / state

ಅರಸೀಕೆರೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಅದ್ಧೂರಿ ವಿಷು ಕಣಿ ಪೂಜೆ - ಅರಸೀಕೆರೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಪೂಜೆ ನ್ಯೂಸ್​

ಅರಸೀಕೆರೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಷು ಕಣಿ ಪೂಜೆಯನ್ನು ಏರ್ಪಡಿಸಲಾಗಿದ್ದು, ಕೊರೊನಾ ಮಹಾಮಾರಿ ಬೇಗ ತೊಲಗಿ ವಿಶ್ವ ಸಮೃದ್ಧಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ  ವಿಷು ಕಣಿ ಪೂಜೆ
ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಷು ಕಣಿ ಪೂಜೆ

By

Published : Apr 16, 2020, 1:43 PM IST

ಹಾಸನ: ಅರಸೀಕೆರೆ ನಗರದ ಹಾಸನ ರಸ್ತೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಷು ಕಣಿ ಪೂಜೆಯ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ, ಅಲಂಕಾರ ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.

ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಷು ಕಣಿ ಪೂಜೆ

ದೇವಸ್ಥಾನದ ಅಧ್ಯಕ್ಷ ಪುರುಷೋತ್ತಮ ಮಾತನಾಡಿ, ಕರ್ನಾಟಕದಲ್ಲಿ ಚಂದ್ರಮಾನ ಯುಗಾದಿ ಆಚರಿಸುವ ರೀತಿ ಕೇರಳ ತಮಿಳುನಾಡಿನಲ್ಲಿ ಸೌರಮಾನ ಯುಗಾದಿಯನ್ನು ಆಚರಿಸಲಾಗುತ್ತದೆ. ಆ ಮೂಲಕ ನೂತನ ವರ್ಷವನ್ನು ಪ್ರಾರಂಭಿಸುತ್ತಾರೆ. ಅದರ ವಿಶೇಷವಾಗಿ ರೈತರು ಬೆಳೆದ ತರಕಾರಿ ಹೂವು ಹಣ್ಣುಗಳನ್ನು ದೇವರ ಮುಂದೆ ಇಟ್ಟು ಪೂಜೆ ನೆರವೇರಿಸಲಾಗುವುದು. ಈ ಸಂದರ್ಭದಲ್ಲಿ ಕೊರೊನಾ ಮಹಾಮಾರಿ ಬೇಗನೆ ತೊಲಗಲಿ ವಿಶ್ವ ಸಮೃದ್ಧಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು ಎಂದು ತಿಳಿಸಿದರು.

ABOUT THE AUTHOR

...view details