ಕರ್ನಾಟಕ

karnataka

ETV Bharat / state

ಕೈಮಗ್ಗ ಮತ್ತು ಜವಳಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಶ್ರೀಮಂತ ಬಾಳಾ ಸಾಹೇಬ್​ ಪಾಟೀಲ್

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಶ್ರೀಮಂತ ಬಾಳಾ ಸಾಹೇಬ್​ ಪಾಟೀಲ್​ ನಡೆಸಿದ್ರು. ಅಲ್ಲದೇ ಈಗಾಗಲೇ ನಷ್ಟ ಅನುಭವಿಸಿ ಕಂಪನಿ ಮುಚ್ಚಿರುವವರಿಗೆ ಪೂರ್ಣ ಪ್ರಮಾಣದ ಸಹಕಾರ ಮತ್ತು ಸಾಲ ಸೌಲಭ್ಯ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವ ಶ್ರೀಮಂತ ಬಾಳಾ ಸಾಹೇಬ್​ ಪಾಟೀಲ್​ ಸಭೆ
ಸಚಿವ ಶ್ರೀಮಂತ ಬಾಳಾ ಸಾಹೇಬ್​ ಪಾಟೀಲ್​ ಸಭೆ

By

Published : Sep 10, 2020, 7:27 PM IST

Updated : Sep 10, 2020, 7:40 PM IST

ಹಾಸನ:ಕೈಮಗ್ಗ ಮತ್ತು ಜವಳಿ ಉದ್ಯಮ ನಡೆಸುತ್ತಿರುವವರಿಗೆ ಸಹಾಯವಾಗುವಂತೆ ಹೊಸ ಹೊಸ ಯೋಜನೆಗಳ ಕುರಿತು ಅರಿವು ಮೂಡಿಸಿ, ಪೂರಕ ಸಾಲ ಸೌಲಭ್ಯ ಒದಗಿಸುವಂತೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಬಾಳಾ ಸಾಹೇಬ್​ ಪಾಟೀಲ್​ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಾತನಾಡಿದ ಅವರು ಜಿಲ್ಲೆಯಲ್ಲಿನ ಸಿದ್ದ ಉಡುಪು ತರಬೇತಿ ಕೇಂದ್ರಗಳಿಂದ ನಿರುದ್ಯೋಗಿ ಯುವಕ ಯುವತಿಯರಿಗೆ ಸಿದ್ದ ಉಡುಪು ತಯಾರಿಕೆಯಲ್ಲಿ ತರಬೇತಿ ನೀಡಿ ಜೀವನಾಧಾರಕ್ಕೆ ವ್ಯವಸ್ಥೆ ಕಲ್ಪಿಸಿ ಎಂದರು.

ಕೈಮಗ್ಗ ಮತ್ತು ಜವಳಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

ಕೈಮಗ್ಗ ಮತ್ತು ಜವಳಿ ಉದ್ಯಮದಿಂದ ಈಗಾಗಲೇ ನಷ್ಟ ಅನುಭವಿಸಿ ಕಂಪನಿ ಮುಚ್ಚಿರುವವರಿಗೆ ಪೂರ್ಣ ಪ್ರಮಾಣದ ಸಹಕಾರ ಮತ್ತು ಸಾಲ ಸೌಲಭ್ಯ ನೀಡಿ. ಉದ್ಯಮಿದಾರರು ಮರಳಿ ಪ್ರಾರಂಭಿಸುವಂತೆ ಅರಿವು ಮೂಡಿಸಿ ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಕಲ್ಪಿಸುವ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗಂಗಾ ಕಲ್ಯಾಣ ಯೋಜನೆಯಿಂದ ಬೋರ್‌ವೆಲ್ ಪಡೆದ ರೈತರ ಜಮೀನಿಗೆ ಭೆಟಿ ನೀಡಿ ಯಾವ ಬೆಳೆ ಬೆಳೆಯುತ್ತಿದ್ದಾರೆ, ಅದರಿಂದ ರೈತರಿಗೆ ಸಹಾಯವಾಗಿದೆಯೇ, ಎಷ್ಟು ಆದಾಯ ಪಡೆಯುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ ಫೋಟೋ ತೆಗೆದು ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಎಂದರಲ್ಲದೇ, ಕಟ್ಟಡ ನಿರ್ಮಾಣದಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ ಯಾವುದೇ ಲೋಪ ದೋಷಗಳಾಗದಂತೆ ನಿಗಾವಹಿಸಿ ಎಂದು ಸಚಿವರು ಕರ್ನಾಟಕ ಗೃಹ ಮಂಡಳಿಯ ಎ.ಇ.ಇ. ಅವರಿಗೆ ಸೂಚಿಸಿದರು.ಈ ಬಾರಿ ಪ್ರತಿ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ. 100ರಷ್ಟು ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಿಕೊಳ್ಳಲು ಕ್ರಮವಹಿಸುವುದರ ಜೊತೆಗೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯು ಅನುತ್ತೀರ್ಣರಾಗದಂತೆ ಉತ್ತಮ ಗುಣ ಮಟ್ಟದ ಶಿಕ್ಷಣ ನೀಡಿ ಶೇ. 100 ರಷ್ಟು ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶ್ರಮಿಸುವಂತೆ ನಿರ್ದೇಶಿಸಿದರು.

Last Updated : Sep 10, 2020, 7:40 PM IST

ABOUT THE AUTHOR

...view details