ಕರ್ನಾಟಕ

karnataka

ETV Bharat / state

ನಕ್ಷತ್ರ ಆಮೆ ಮಾರಾಟಕ್ಕೆ ಯತ್ನ: ಹಾಸನದಲ್ಲಿ ಇಬ್ಬರ ಬಂಧನ - star tortoise

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಕ್ಷತ್ರ ಆಮೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ಆಮೆ ವಶಪಡಿಸಿಕೊಂಡಿದ್ದಾರೆ.

dsd
ನಕ್ಷತ್ರ ಆಮೆ ಮಾರಾಟಕ್ಕೆ ಯತ್ನ

By

Published : Jan 6, 2021, 10:41 PM IST

ಹಾಸನ/ಚನ್ನರಾಯಪಟ್ಟಣ: ತಾಲೂಕಿನ ಬಾಗುರು ಹೋಬಳಿ ತಿಮ್ಮಾಪುರ ಗ್ರಾಮದ ಗಡಿಯಲ್ಲಿ ನಕ್ಷತ್ರ ಆಮೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ಆಮೆ ಹಾಗೂ ಬೈಕ್ ವಶಪಡಿಸಿಕೊಂಡಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ತಿಮ್ಮನಹಳ್ಳಿಯ ನಿವೃತ್ತ ಶಿಕ್ಷಕ ಜಯಣ್ಣ(62) ಹಾಗೂ ಆನೇಕಲ್ ತಾಲೂಕು ಜಿಗಣಿ ಗ್ರಾಮದ ರಮೇಡ್ (49) ಬಂಧಿತರು.

ಕೃತ್ಯದಲ್ಲಿ ಭಾಗಿಯಾಗಿದ್ದ ನಾಲ್ವರು ಚೌಡೇನಹಳ್ಳಿ ದುರ್ಗಪ್ಪ ಮೂರ್ತಿ, ಶಿವು ಹಾಗೂ ಅಣ್ಣಪ್ಪ ಎಂದು ಗುರುತಿಸಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಖಚಿತ ಮಾಹಿತಿಯ ಮೇರೆಗೆ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

ABOUT THE AUTHOR

...view details