ಸಕಲೇಶಪುರ (ಹಾಸನ):ರಾಜ್ಯ ಉಚ್ಚ ನ್ಯಾಯಾಲಯದ ಆದೇಶದಂತೆ ಮುಂದಿನ ದಿನಗಳಲ್ಲಿ ಮಳಲಿ ಗ್ರಾಮದಲ್ಲಿರುವ ಪುರಸಭೆಯ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದ್ದಾರೆ.
ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ; ಶಾಸಕ ಎಚ್.ಕೆ. ಕುಮಾರಸ್ವಾಮಿ - MLA H.K. Kumaraswamyv
ಪಟ್ಟಣದ ಕಸ ವಿಲೇವಾರಿಗೆ ಸಾಕಷ್ಟು ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಜಾತ್ರಾ ಮೈದಾನದಲ್ಲಿ ಕಸವನ್ನು ಸುರಿಯಲಾಗುತ್ತಿತ್ತು. ಶ್ರೀಘ್ರದಲ್ಲೇ ವಿಲೇವಾರಿ ಘಟಕದಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದ್ದಾರೆ.
ಪಟ್ಟಣದ ಜಾತ್ರೆ ಮೈದಾನದಲ್ಲಿನ ಪುರಸಭೆಯ ತಾತ್ಕಾಲಿಕ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ನಂತರ ಮಾತನಾಡಿ, ಪಟ್ಟಣದ ಕಸ ವಿಲೇವಾರಿಗೆ ಸಾಕಷ್ಟು ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಜಾತ್ರಾ ಮೈದಾನದಲ್ಲಿ ಕಸವನ್ನು ಸುರಿಯಲಾಗುತ್ತಿತ್ತು. ಕಸದಿಂದ ಗ್ಯಾರೇಜ್ ಲೈನ್ ಮಾಲೀಕರು ಹಾಗೂ ಕಾರ್ಮಿಕರಿಗೆ ಸಮಸ್ಯೆಯಾಗುತ್ತಿರುವುದನ್ನು ಕಂಡು ಪುರಸಭೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ತಂಡದಿಂದ ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿ ತಾತ್ಕಾಲಿಕ ಕಸ ವಿಲೇವಾರಿ ಘಟಕಕ್ಕೆ ಕಸ ಸ್ಥಳಾಂತರ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇಲ್ಲಿ ಕಸ ಹಾಕಲಾಗುವುದಿಲ್ಲ ಎಂದರು.
ಕಸವನ್ನು ಹಾಕಲು ಬೇರೆಡೆ ಜಾಗವನ್ನು ಗುರುತಿಸಲಾಗಿದ್ದು, ರಾಜ್ಯ ಉಚ್ಚ ನ್ಯಾಯಾಲಯದ ಆದೇಶದಂತೆ, ಮಳಲಿ ಗ್ರಾಮದಲ್ಲಿರುವ ಪುರಸಭೆಯ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ಮಳಲಿ ಗ್ರಾಮಸ್ಥರನ್ನು ನಾನು ಮತ್ತು ಉಪವಿಭಾಗಾಧಿಕಾರಿಗಳು ಒಟ್ಟಾಗಿ ಭೇಟಿ ಮಾಡಿ ಸಭೆ ಆಯೋಜಿಸಿ ವೈಜ್ಞಾನಿಕ ಕಸ ವಿಲೇವಾರಿ ಕುರಿತು ಗ್ರಾಮಸ್ಥರ ಸಭೆ ನಡೆಸುತ್ತೇವೆ. ಈಗಾಗಲೇ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ಟೆಂಡರ್ ಕರೆಯಲಾಗಿದೆ ಎಂದರು.