ಕರ್ನಾಟಕ

karnataka

ETV Bharat / state

ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ - hassan student suicide

ಕಾಲೇಜೊಂದರ ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ.

ಕಾಲೇಜು ಕಟ್ಟಡ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಕಾಲೇಜು ಕಟ್ಟಡ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

By ETV Bharat Karnataka Team

Published : Nov 2, 2023, 10:03 PM IST

ಹಾಸನ: ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಚನ್ನರಾಯಪಟ್ಟಣ ಸಮೀಪದ ಹೊನ್ನ ಶೆಟ್ಟಿಹಳ್ಳಿ ಗ್ರಾಮದ ಯುವತಿ ಹಾಸನ ನಗರದ ಹೊರವಲಯದಲ್ಲಿರುವ ಕಾಲೇಜುವೊಂದರಲ್ಲಿ ಡಿಪ್ಲೋಮಾ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಇನ್ನು ಸಾವಿಗೆ ನಿಕರ ಕಾರಣ ತಿಳಿದು ಬಂದಿಲ್ಲ ಆದರೆ, ಪರೀಕ್ಷೆಯಲ್ಲಿ ನಕಲು ಮಾಡಿ ಉಪನ್ಯಾಸಕರ ಕೈಗೆ ಸಿಕ್ಕಿ ಬಿದ್ದಿದಳು ಎನ್ನಲಾಗಿದೆ. ಇದರಿಂದ ತನ್ನ ಮರ್ಯಾದೆ ಹಾಳಾಯ್ತು ಎಂಬ ಕಾರಣಕ್ಕೆ ಕಾಲೇಜಿನ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ:ರೋಗಿಯನ್ನು ಜೋಳಿಗೆಯಲ್ಲಿ ಕಟ್ಟಿ ಆಸ್ಪತ್ರೆಗೆ ಒಯ್ಯುವ ಗ್ರಾಮಸ್ಥರು.. ಇದು ಹೀನಾರಿ ಗ್ರಾಮದ ನರಕಯಾತನೆ

ಹುಬ್ಬಳ್ಳಿಯಲ್ಲಿ ರೈತ ಆತ್ಮಹತ್ಯೆ:ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್​ವೊಂದರ ಮ್ಯಾನೇಜರ್​ ರೈತನಿಗೆ ಕಿರುಕುಳ‌ ನೀಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. ಮಹಾದೇವಪ್ಪ ಫಕೀರಪ್ಪ ಜಾವೂರ್ (75) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ರೈತ. ನಿನ್ನೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತ ರೈತ 19 ಎಕರೆ 16 ಗುಂಟಾ ಕೃಷಿ ಜಮೀನನ್ನು ಹೊಂದಿದ್ದು, 2015 ರಲ್ಲಿ ಮೊರಬ ಗ್ರಾಮದಲ್ಲಿರುವ ಬ್ಯಾಂಕ್ ಒಂದರಿಂದ 14 ಲಕ್ಷ 50 ಸಾವಿರ ರೂ ಬೆಳೆ ಸಾಲ ತೆಗೆದುಕೊಂಡಿದ್ದರು. 2017 ರವರೆಗೆ ಸುಮಾರು ಎರಡು ವರ್ಷಗಳ ಕಾಲ ಬೆಳೆ ಸಾಲ ರಿನೀವಲ್ ಕೂಡ ಮಾಡಿದ್ದರು. 2017 ರಿಂದ ಇಲ್ಲಿಯವರೆಗೆ ಯಾವುದೇ ರೀತಿಯ ಸಾಲ ಮರು ಪಾವತಿಯಾಗಿರಲಿಲ್ಲ. ಆದರೆ, ಬರಗಾಲದ ನಡುವೆಯೇ ಬ್ಯಾಂಕ್ ಮ್ಯಾನೇಜರ್ ಸಾಲ ವಸೂಲಿಗೆ ಬಂದಿದ್ದರು. ಇದರಿಂದ ಹೆದರಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಮಗ ಆರೋಪಿಸಿದ್ದಾರೆ.

ಗೆಳಯರಿಬ್ಬರು ಆತ್ಮಹತ್ಯೆಗೆ ಯತ್ನ:ಗೆಳೆಯರಿಬ್ಬರು ಒಟ್ಟಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಟ್ಕಳ ತಾಲೂಕಿನ ಕೈಕಿಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿತ್ತು. ಇದರಲ್ಲಿ ಒಬ್ಬ ಯುವಕ ಸಾವನ್ನಪ್ಪಿದ್ದು, ಇನ್ನೊಬ್ಬ ತೀವ್ರವಾಗಿ ಅಸ್ವಸ್ಥಗೊಂಡಿದ್ದ. ಮೃತ ಯುವಕನನ್ನು ಕೈಕಿಣಿ ಮಠದಹಿತ್ತು ನಿವಾಸಿ ಗಿರೀಶ ಮಾರುತಿ ಮೊಗೇರ ಎಂದು ಗುರುತಿಸಲಾಗಿತ್ತು. ಮತ್ತೊಬ್ಬ ಲೋಕರಾಜ ನಾಗರಾಜ ಮೊಗೇರ ಅಸ್ವಸ್ಥಗೊಂಡಿದ್ದ. ಇಬ್ಬರೂ ಒಟ್ಟಿಗೆ ವಿಷ ಸೇವಿಸಿದ್ದರು.

ABOUT THE AUTHOR

...view details