ಕರ್ನಾಟಕ

karnataka

By

Published : Mar 4, 2020, 6:28 PM IST

ETV Bharat / state

ಬಸ್​​ಗಳ ಕೊರತೆಯಿಂದ ಶಾಲಾ, ಕಾಲೇಜುಗಳಿಗೆ ತೆರಳಲು ಸಮಸ್ಯೆ: ಹಾಸನದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ನಗರ ಸಾರಿಗೆ ಬಸ್​ನ ಸಮಸ್ಯೆ ಬಗೆಹರಿಸುವಂತೆ, ಕರ್ನಾಟಕ ರಾಜ್ಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಸಾಲಗಾಮೆ ಗೇಟ್ ಮಾರ್ಗದ ಸಂಚಾರದಲ್ಲಿ ಬಸ್​ನ ಸಮಸ್ಯೆ ತುಂಬಾ ಇದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕೆಎಸ್​​ಆರ್​​ಟಿಸಿ ವಿಭಾಗೀಯ ಕಚೇರಿಗೆ ಮನವಿ ಸಲ್ಲಿಸಲಾಯಿತು.

Students protest in Hassan
ಹಾಸನದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಹಾಸನ: ನಗರ ಸಾರಿಗೆ ಬಸ್​ನ ಸಮಸ್ಯೆ ಬಗೆಹರಿಸುವಂತೆ, ಕರ್ನಾಟಕ ರಾಜ್ಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಸಾಲಗಾಮೆ ಗೇಟ್ ಮಾರ್ಗದ ಸಂಚಾರದಲ್ಲಿ ಬಸ್​ನ ಸಮಸ್ಯೆ ತುಂಬಾ ಇದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕೆಎಸ್​​ಆರ್​​ಟಿಸಿ ವಿಭಾಗೀಯ ಕಚೇರಿಗೆ ಮನವಿ ಸಲ್ಲಿಸಲಾಯಿತು.

ಸಾಲಗಾಮೆ ಗೇಟ್ ಹತ್ತಿರ ಸರ್ಕಾರಿ ವಿಜ್ಞಾನ ಕಾಲೇಜು, ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಗೃಹ ವಿಜ್ಞಾನ ಕಾಲೇಜುಗಳಿವೆ. ಒಟ್ಟು 12 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಬಂದು ಹೋಗುತ್ತಾರೆ. ಪ್ರತಿನಿತ್ಯ ಬೆಳಗ್ಗೆ ಎಲ್ಲಾ ವಿದ್ಯಾರ್ಥಿಗಳು ಹೊಸ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ಕಾಲೇಜಿಗೆ ತೆರಳಬೇಕಾಗಿದೆ. ಹೀಗಾಗಿ ಬೆಳಗ್ಗೆ 8 ಗಂಟೆಯಿಂದ 10 ಗಂಟೆಯವರೆಗೂ ನಗರ ಸಾರಿಗೆ ಬಸ್​​ಗಳ ಸಂಖ್ಯೆ ಹೆಚ್ಚಳ ಮಾಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.

ಹಾಸನದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ತಕ್ಷಣವೇ ಬಸ್​​​ಗಳ ಸಂಖ್ಯೆ ಹೆಚ್ಚಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು. ಇನ್ನು ಬಸ್​​​ನಲ್ಲಿ ಪ್ರಯಾಣಿಸುವಾಗ ಸಾರಿಗೆ ಸಿಬ್ಬಂದಿ ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ಮಾತನಾಡುತ್ತಿದ್ದು, ಮರ್ಯಾದೆ ಕೊಟ್ಟು ಮಾತನಾಡಬೇಕು ಎಂದು ತಮ್ಮ ಅಳಲು ತೋಡಿಕೊಂಡರು. ನಗರ ಸಾರಿಗೆ ಬಸ್​​ಗಳು 10 ನಿಮಿಷಕ್ಕೊಮ್ಮೆ ಬರಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details