ಹಾಸನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು, ಉಪನಿರ್ದೇಶಕರ ಕಚೇರಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಸನ ಮತ್ತು ಸಂತ ಫಿಲೋಮಿನಾ ಬಾಲಕಿಯರ ಪದವಿಪೂರ್ವ ಕಾಲೇಜು ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕಬ್ಬಡ್ಡಿ, ಬ್ಯಾಡ್ಮಿಂಟನ್, ವಾಲಿಬಾಲ್, ತ್ರೋಬಾಲ್ ಸೇರಿದಂತೆ ವಿವಿಧ ಕ್ರೀಡೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಗೆಲುವಿಗಾಗಿ ಭಾರಿ ಪೈಪೋಟಿ ನೀಡಿದರು.
ತಾಲೂಕು ಮಟ್ಟದ ಕ್ರೀಡಾಕೂಟ..ವಿದ್ಯಾರ್ಥಿಗಳಿಂದ ಗೆಲುವಿಗಾಗಿ ಭಾರಿ ಪೈಪೋಟಿ - ಕಬಡ್ಡಿ ಪಂದ್ಯಾವಳಿ
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು, ಉಪನಿರ್ದೇಶಕರ ಕಚೇರಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಸನ ಮತ್ತು ಸಂತ ಫಿಲೋಮಿನಾ ಬಾಲಕಿಯರ ಪದವಿಪೂರ್ವ ಕಾಲೇಜು ಹಾಸನ ಇವರ ಸಂಯುಕ್ತಾಶ್ರಯದಲ್ಲಿ ನಡೆದ ವಿವಿಧ ಕ್ರೀಡೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಗೆಲುವಿಗಾಗಿ ಭಾರಿ ಪೈಪೋಟಿ ನೀಡಿದರು.

Taluk level sporting event in Hassan
ವಿದ್ಯಾರ್ಥಿಗಳಿಂದ ಗೆಲುವಿಗಾಗಿ ಭಾರಿ ಪೈಪೋಟಿ
ವಿವಿಧ ಕ್ರೀಡೆಗಳಲ್ಲಿ ಮುಖ್ಯವಾಗಿ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಭಾರಿ ಬೇಡಿಕೆ ಬಂದಿತು. ಆಟ ವೀಕ್ಷಣೆ ಮಾಡಲು ಪ್ರೇಕ್ಷಕರ ನೂಕು ನುಗ್ಗಲು ಎಂಬಂತೆ ಆಟದ ಸುತ್ತ ವಿದ್ಯಾರ್ಥಿಗಳು, ಸಾರ್ವಜನಿಕರು ನಿಂತು ಪಂದ್ಯಾವಳಿಯನ್ನು ಕುತೂಹಲದಿಂದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುತ್ತಿದ್ದರು.
ಹೊಸ ಆಟಕ್ಕೆ ಇಷ್ಟೋಂದು ಕ್ರೀಡಾಭಿಮಾನಿಗಳು ಸೇರುವುದಿಲ್ಲ, ಆದರೆ ಕಬಡ್ಡಿ ಪಂದ್ಯಾವಳಿ ಇಂದಿನ ಯುವಕರಿಗೆ ಆಕರ್ಷಣೆಯಾಗಿದೆ ಎಂದರೆ ತಪ್ಪಾಗುವುದಿಲ್ಲ. ಪ್ರತಿ ಆಟಗಾರರು ಚಪ್ಪಾಳೆ ಹಾಗೂ ಶಿಳ್ಳೆಯ ಮೂಲಕ ಹುರಿದುಂಬಿಸುತ್ತಿದ್ದರು. ಮಹಿಳಾ ಕ್ರೀಡಾಪಟುಗಳು ಸಹ ಕಬ್ಬಡಿ ಆಟ ನೋಡಲು ಮುಂದಾಗಿದ್ದರು.