ಕರ್ನಾಟಕ

karnataka

ETV Bharat / state

ದಿನವೊಂದಕ್ಕೆ 3,300 ತಪಾಸಣಾ ಗುರಿ ನೀಡಿದ ಸರ್ಕಾರ: ಆರೋಗ್ಯಾಧಿಕಾರಿ ಡಾ. ಸತೀಶ್ - Health officer Dr. Satish

ವಿವಿಧ ಇಲಾಖೆಗಳಲ್ಲಿ ಹೆಚ್ಚು ಬ್ಯೂಸಿ ಇರುವ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಬುಧವಾರ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯಾಧಿಕಾರಿ ಡಾ. ಸತೀಶ್ ಹೇಳಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

By

Published : Oct 7, 2020, 8:49 PM IST

ಹಾಸನ:ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರವೂ ದಿನವೊಂದಕ್ಕೆ 3,300 ತಪಾಸಣಾ ಗುರಿ ನೀಡಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ಹೇಳಿದ್ದಾರೆ.

ವಿವಿಧ ಇಲಾಖೆಗಳಲ್ಲಿ ಹೆಚ್ಚು ಬ್ಯೂಸಿ ಇರುವ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಬುಧವಾರ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದರು.

ಆರೋಗ್ಯಾಧಿಕಾರಿ ಡಾ. ಸತೀಶ್

ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ. ಸರ್ಕಾರದ ಆದೇಶ ಉಲ್ಲಂಘಿಸಿ ಮಾಸ್ಕ್ ಧರಿಸದೆ ಹೊರ ಬಂದರೆ ಒಂದು ಸಾವಿರ ರೂ.ಗಳ ದಂಡ ವಿಧಿಸುವ ಕಾರ್ಯಾಚರಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ಅವರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಸರದಿ ಸಾಲಿನಲ್ಲಿ ನಿಂತು ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದವರು, ನಂತರ ಯಾವ ಸಾಮಾಜಿಕ ಅಂತರವಿಲ್ಲದೇ ಒಟ್ಟೊಟ್ಟಿಗೆ ನಿಂತು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುತ್ತಿದುದ್ದು ಕಂಡುಬಂತು.

ABOUT THE AUTHOR

...view details