ಕರ್ನಾಟಕ

karnataka

ETV Bharat / state

ವೃದ್ಧ ದಂಪತಿ ಕೊಲೆ ಪ್ರಕರಣ: ವಾರದೊಳಗೆ ಆರೋಪಿಗಳ ಹೆಡೆಮುರಿಕಟ್ಟಿದ ಪೊಲೀಸರು

ಆಗಸ್ಟ್ 29ರ ರಾತ್ರಿ ಚನ್ನರಾಯಪಟ್ಟಣ ತಾಲೂಕಿನ ಆಲಗೊಂಡನಹಳ್ಳಿಯ ತೋಟದ ಮನೆಯಲ್ಲಿ ದಂಪತಿ ಮುರಳಿಧರ್ ಮತ್ತು ಉಮಾದೇವಿ ಅವರನ್ನು ಉಸಿರುಗಟ್ಟಿಸಿ ಕೊಲೆಗೈದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

By

Published : Sep 6, 2020, 10:18 AM IST

Updated : Sep 6, 2020, 10:36 AM IST

ವೃದ್ದ ದಂಪತಿ ಕೊಲೆ ಪ್ರಕರಣದ ಆರೋಪಿಗಳ ಬಂಧನ
ವೃದ್ದ ದಂಪತಿ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಹಾಸನ: ವೃದ್ಧ ದಂಪತಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಮೂಲದ ನಂದಕುಮಾರ್, ಬೆಂಗಳೂರು ಮೂಲದ ಯೋಗಾನಂದ, ಚನ್ನರಾಯಪಟ್ಟಣದ ಭರತ್ ಮತ್ತು ಮಧು ಬಂಧಿತ ಆರೋಪಿಗಳು.

ಆಗಸ್ಟ್ 29ರ ರಾತ್ರಿ ಚನ್ನರಾಯಪಟ್ಟಣ ತಾಲೂಕಿನ ಆಲಗೊಂಡನಹಳ್ಳಿಯ ತೋಟದ ಮನೆಯಲ್ಲಿ ಮುರಳಿಧರ್ ಮತ್ತು ಉಮಾದೇವಿ ದಂಪತಿಯನ್ನು ಉಸಿರುಗಟ್ಟಿಸಿ ಕೊಲೆಗೈದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು.

ಮಂಜಶೆಟ್ಟಿ ಆಲಿಯಾಸ್ ದ್ವಾರಕೀಶ್ ಎಂಬುವನನ್ನ ಮೊದಲು ವಶಕ್ಕೆ ಪಡೆದಿದ್ದ ಪೊಲೀಸರು ನಂತರ ಆತ ನೀಡಿದ ಸುಳಿವಿನ ಮೇರೆಗೆ ಪ್ರಸಾದ್ ಅಲಿಯಾಸ್ ಗುಂಡ ಎಂಬುವನನ್ನು ಬಂಧಿಸಿದರು. ಪ್ರಸಾದ್ ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದಾಗ ಆತನ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದರು.

ವೃದ್ದ ದಂಪತಿ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಹಾಸನದಲ್ಲಿ ವೃದ್ಧ ದಂಪತಿ ಕೊಲೆ: ಆಸ್ತಿಗಾಗಿ ಸಂಬಂಧಿಕರಿಂದ ಕೃತ್ಯ ಶಂಕೆ

ಬಂಧಿತ ಆರೋಪಿಗಳಿಂದ 15.8 ಲಕ್ಷ ಮೌಲ್ಯದ 316 ಗ್ರಾಂ ಚಿನ್ನಾಭರಣ, 1.25 ಲಕ್ಷ ಮೌಲ್ಯದ ಬೆಳ್ಳಿ ಹಾಗೂ 3 ಮೊಬೈಲ್ ಹಾಗೂ 20 ಸಾವಿರ ನಗದನ್ನು ವಶಪಡಿಸಿಕೊಂಡಿದ್ದು, ಕೃತ್ಯಕ್ಕೆ ಬಳಸಿದ 6 ಲಕ್ಷ ರೂ. ಮೌಲ್ಯದ ಜೈಲೋ ಕಾರು, 3 ದ್ವಿಚಕ್ರ ವಾಹನ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವೃದ್ಧ ದಂಪತಿ ಕೊಲೆ ಪ್ರಕರಣ: ಶಂಕಿತ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್​​

ಕಳೆದ ಒಂದು ತಿಂಗಳಿನಿಂದ ಜಿಲ್ಲೆಯಲ್ಲಿ ಸುಮಾರು 13ಕ್ಕೂ ಹೆಚ್ಚು ಕೊಲೆ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಚನ್ನರಾಯಪಟ್ಟಣ ತಾಲೂಕಿನಲ್ಲಿಯೇ ಸುಮಾರು ಎಂಟಕ್ಕೂ ಅಧಿಕ ಕೊಲೆ ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ದಿಂಬಿನಿಂದ ಉಸಿರುಗಟ್ಟಿಸಿ ವೃದ್ಧ ದಂಪತಿ ಹತ್ಯೆ: ಬೆಳ್ಳಂಬೆಳಗ್ಗೆ ಗುಂಡಿನ ಮೊರೆತ, ಆರೋಪಿಗಳ ಬಂಧನ

ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದ ಚನ್ನರಾಯಪಟ್ಟಣ, ಬೇಲೂರು ಹಾಗೂ ಹೊಳೆನರಸೀಪುರ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಹೆಚ್ಚಿನ ಪಾತ್ರ ವಹಿಸಿದ್ದ ವಿಶೇಷ ತನಿಖಾ ತಂಡಕ್ಕೆ ಎಸ್ಪಿ ಶ್ರೀನಿವಾಸ್ ಗೌಡ ಅಭಿನಂದನೆ ಸಲ್ಲಿಸಿದ್ದಾರೆ.

Last Updated : Sep 6, 2020, 10:36 AM IST

ABOUT THE AUTHOR

...view details