ಹಾಸನ:ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡು ನಾಲ್ವರು ಕೊಲೆಯಾಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾರಗೋಡನಹಳ್ಳಿಯಲ್ಲಿ ಇತ್ತೀಚೆಗೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹೊಲದ ಬಳಿ ನಡೆದ ಗಲಾಟೆಯ ದೃಶ್ಯಗಳನ್ನು ಸ್ಥಳೀಯರೊಬ್ಬರು ಮೊಬೈಲ್ ಕ್ಯಾಮೆರಾ ಮೂಲಕ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಘರ್ಷಣೆಯಲ್ಲಿ ಮಲ್ಲೇಶ್(55), ರವಿ(35), ಮಂಜೇಶ್ (27) ಮತ್ತು ಪಾಪಣ್ಣಿ ಎಂಬುವವರು ಸಾವನ್ನಪ್ಪಿದ್ದರು.