ಹಾಸನ: ಚಿಕಿತ್ಸೆ ಪಡೆಯುತ್ತಿರುವ ರೋಗಿಯ ಪತಿಗೆ ಹಾಸನದ ಸರ್ಕಾರಿ ಹೈಟೆಕ್ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿದ್ದಾನೆ.
ಆಸ್ಪತ್ರೆಯ ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ರೋಗಿ ಪತಿಗೆ ಥಳಿಸಿದ ಸೆಕ್ಯುರಿಟಿ ಗಾರ್ಡ್.. ವಿಡಿಯೋ ವೈರಲ್ - The security guard who beat the patient's husband
ಹಾಸನದ ಸರ್ಕಾರಿ ಹೈಟೆಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಸೆಕ್ಯುರಿಟಿ ಗಾರ್ಡ್ ಚಿಕಿತ್ಸೆ ಪಡೆಯುತ್ತಿರುವ ರೋಗಿಯ ಪತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ.
ಸಿಬ್ಬಂದಿ ಹಾಗೂ ರೋಗಿ ಸಂಬಂಧಿಗೆ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರೋಗಿ ಸಂಬಂಧಿಗೆ ಸುಮಾರು 4-5 ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸಿಬ್ಬಂದಿ ಹಲ್ಲೆ ಮಾಡಿರುವುದು ಮೊಬೈಲ್ನಲ್ಲಿ ಸೆರೆಯಾಗಿದೆ.
ಪತ್ನಿ ಹೆರಿಗೆ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹಾಸನದ ಹೆಚ್.ಮೈಲಾನಹಳ್ಳಿ ನಿವಾಸಿ ಸಂದೀಪ್ ಎಂಬುವರು ಅಳಲು ತೋಡಿಕೊಂಡಿದ್ದಾರೆ. ಸದ್ಯ ಆಸ್ಪತ್ರೆ ಸಿಬ್ಬಂದಿ ರೋಗಿ ಪತಿ ಮೇಲೆ ದೌರ್ಜನ್ಯ ಎಸಗಿರುವ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.