ಹಾಸನ: ಸುತ್ತಲೂ ಬಿರುಕು ಬಿಟ್ಟ ಗೋಡೆಗಳು, ಜೀವ ಭಯ ಉಂಟು ಮಾಡುವ ಶಿಥಿಲಗೊಂಡಿರುವ ಛಾವಣಿ, ಕುಸಿದು ಬಿದ್ದ ಕಟ್ಟಡ ಹಾಗೂ ಮೇಲ್ಛಾವಣಿಯನ್ನು ದುರಸ್ತಿ ಮಾಡಿಸಲು ಜನಪ್ರತಿನಿಧಿಗಳ ನಿರ್ಲಕ್ಷ್ಯ ಒಂದೆಡೆಯಾದ್ರೆ, ಮತ್ತೊಂದೆಡೆ ಕಟ್ಟಡ ನಿರ್ಮಾಣಕ್ಕೆ ದೇವಾಲಯದ ಆಡಳಿತ ಮಂಡಳಿ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ದುಃಸ್ಥಿತಿಯಲ್ಲಿ ಶಾಲೆ: ಶಾಸಕರು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಅರಕೆರೆ ಗ್ರಾಮ ಹಲವು ಸಮಸ್ಯೆಗಳ ಆಗರವಾಗಿದೆ. ಈ ಗ್ರಾಮಕ್ಕೆ ಇಬ್ಬರು ಶಾಸಕರಿದ್ರೂ ಇಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ ಅನ್ನೋ ಆರೋಪಗಳು ಕೇಳಿಬಂದಿವೆ.
ಈ ಶಾಲಾ ಕಟ್ಟಡ ನಿರ್ಮಾಣವಾಗಿ 5 ದಶಕಗಳೇ ಕಳೆದಿವೆ
ಇಚ್ಛಾಶಕ್ತಿಯ ಕೊರತೆ:
ಶಿಕ್ಷಣ ಕ್ಷೇತ್ರದಲ್ಲಿ ನಾನಾ ಯೋಜನೆಗಳು ಜಾರಿಗೆ ತರುತ್ತಲೇ ಇರುವ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಶಾಲಾ ಕೊಠಡಿಗಳು ಶಿಥಿಲಗೊಂಡು ಬೀಳುವ ಹಂತವನ್ನ ತಲುಪಿವೆ. ಜೀವ ಭಯದಲ್ಲೇ ಮಕ್ಕಳು ಕಲಿಯುತ್ತಿದ್ದು, ಶೈಕ್ಷಣಿಕ ಯೋಜನೆಗಳಿಗೆ ಹೆಚ್ಚು ಒತ್ತು ಕೊಡುವುದರ ಮೂಲಕ ಶಾಲಾ ಕಟ್ಟಡವನ್ನ ದುರಸ್ತಿಗೊಳಿಸಿ ಕಾಯಕಲ್ಪ ಕಲ್ಪಿಸಲು ಸರ್ಕಾರ ಮುಂದಾಗಬೇಕು. ಆದ್ರೆ ಜನಪ್ರತಿನಿಧಿಗಳಿಗೆ ಇಚ್ಛಾಶಕ್ತಿ ಕೊರತೆ ಎಂದು ಜನರು ಆರೋಪಿಸುತ್ತಿದ್ದಾರೆ.