ಕರ್ನಾಟಕ

karnataka

ETV Bharat / state

ಕರ್ತವ್ಯ ಲೋಪ ಆರೋಪ: ಹಾಸನದಲ್ಲಿ ಮೂವರು ಪಿಡಿಒ ಅಮಾನತು - ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ

ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಮಂಜೂರು ಮಾಡಿಕೊಟ್ಟಿದ್ದಾರೆ ಎಂಬ ಆರೋಪದಡಿ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಆದೇಶಿಸಿದ್ದಾರೆ.

Representative image
ಪ್ರಾತಿನಿಧಿಕ ಚಿತ್ರ

By

Published : Jul 14, 2023, 12:33 PM IST

ಹಾಸನ:ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮೂವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO)ಗಳನ್ನು ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಮಂಜೂರು ಮಾಡಿಕೊಟ್ಟಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ. ಡಿ. ಕಾಳೇನಹಳ್ಳಿ ಪಿಡಿಒ ಸಿಎನ್ ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಮೂವರು ಚನ್ನರಾಯಪಟ್ಟಣ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು.

ಚನ್ನರಾಯಪಟ್ಟಣ ತಾಲೂಕಿನ ಬಳದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮಿಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ನೋಂದಣಿ ಮಾಡಿರುವ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಈ ಮೂವರನ್ನು ಅಮಾನತು ಮಾಡಲಾಗಿದೆ ಎಂದು ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಅವರು ಪ್ರಕಟಣೆ ಹೊರಡಿಸಿದ್ದಾರೆ.

ಪ್ರಕಟಣೆ ಪ್ರತಿ

ಪ್ರಕರಣದ ವಿವರ:ಚನ್ನರಾಯಪಟ್ಟಣ ತಾಲೂಕು ಬಳದರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಉದಯಪುರ ಗ್ರಾಮದ ಸರ್ವೆ ಸಂ.15ರಲ್ಲಿ ದಿನಾಂಕ 16/11/1991 ರಂದು ತಹಶೀಲ್ದಾರ್​ ಅವರಿಂದ ನಿವೇಶನ ರಹಿತರಿಗೆ ನಿವೇಶನ ಹಂಚಿಕೆಯಾಗಿರುತ್ತದೆ. ಹಾಗೂ ಸದರಿ ಸರ್ವೇ ನಂಬರ್​ನ ನಿವೇಶನ ನಕ್ಷೆಯ ಪ್ರಕಾರ ದೇವಸ್ಥಾನಕ್ಕಾಗಿ, ಸಾರ್ವಜನಿಕರ ಉಪಯೋಗಕ್ಕಾಗಿ ಮತ್ತು ನೀರಿನ ಕೊಳವೆ ಬಾವಿಗಾಗಿ ಜಾಗ ಮಂಜೂರು ಮಾಡಲಾಗಿತ್ತು. ಆದರೆ 15/02/1992ರಂದು ಉಪದಯಪುರ ಮಂಡಲ ಪಂಚಾಯಿತಿ ವತಿಯಿಂದ ಸದರಿ ಸರ್ವೆ ನಂಬರ್​ನಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಮೀಸಲಿರಿಸಿದ ಜಾಗವನ್ನು 18ಎ ನಿವೇಶನವೆಂದು ಖಾಸಗಿ ವ್ಯಕ್ತಿಯ ಹೆಸರಿಗೆ ದಾಖಲು ಮಾಡಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಮಾಹಿತಿ ನೀಡದ ತಹಶೀಲ್ದಾರ್​ಗೆ 25 ಸಾವಿರ ದಂಡ: ಚಕ್ಕರ್ ಹೊಡೆದ ಪಿಡಿಒ ಅಮಾನತು

ಗದಗದ ಪಿಡಿಒ ಅಮಾನತು:ಸರ್ಕಾರದ ಹಣ ದುರುಪಯೋಗ ಮತ್ತು ಕರ್ತವ್ಯಲೋಪ ಆರೋಪದಡಿ ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಯನ್ನು ಅಮಾನತು ಮಾಡಿ ಇತ್ತೀಚೆಗೆ ಆದೇಶಿಸಲಾಗಿತ್ತು. ಅಧಿಕಾರ ದುರುಪಯೋಗ ಮಾಡಿಕೊಂಡು ಸರ್ಕಾರಿ ಬೊಕ್ಕಸದ 78.55 ಲಕ್ಷ ಹಣ ದುರ್ಬಳಕೆ ಮಾಡಿಕೊಂಡ ಆರೋಪ ಮೇಲ್ನೋಟಕ್ಕೆ ಸಾಬೀತಾಗಿತ್ತು. ಅಲ್ಲದೇ ಅಕ್ರಮ ಎಸಗಿರುವುದು ತನಿಖಾ ಸಮಿತಿಯೊಂದರ ವರದಿಯಿಂದಲೂ ದೃಢಪಪಟ್ಟಿದ್ದು ಪಿಡಿಒ ಸಂಜಯ ಚವಡಾಳ ಅವರನ್ನು ಕಾಯ್ದೆಯಡಿ ಅಮಾನತು ಮಾಡಲಾಗಿದೆ ಎಂದು ಜಿ.ಪಂ.ಸಿಇಒ ಸುಶೀಲಾ ಬಿ ಪ್ರಕಟಣೆ ತಿಳಿಸಿದ್ದರು.

ಪಿಡಿಒ ವಿರುದ್ಧ ನಾನಾ ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಮತ್ತು ಮುಖ್ಯ ಲೆಕ್ಕಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಂಜಯ ಚವಡಾಳ ಕಾರ್ಯನಿರ್ವಹಿಸಿದ 9ಕ್ಕೂ ಅಧಿಕ ಗ್ರಾಮ ಪಂಚಾಯತಿಗಳಲ್ಲಿ ದಾಖಲಾತಿ ಪರಿಶೀಲನೆ ನಡೆಸಿದ ಸಮಿತಿಯು ಪರಿಶೀಲನೆ ನಂತರ ಜಿ.ಪಂ. ಸಿಇಒ ಅವರಿಗೆ ವರದಿ ಸಲ್ಲಿಸಿತ್ತು. ವರದಿಯಲ್ಲಿ ಸಂಜಯ ಎನ್. ಚವಡಾಳ ಹಲವು ಅಕ್ರಮ ಎಸಗಿರುವ ಬಗ್ಗೆ ಬಹಿರಂಗವಾಗಿತ್ತು.

ಇದನ್ನೂ ಓದಿ:ಹಣ ದುರುಪಯೋಗ, ಕರ್ತವ್ಯ ಲೋಪ: ಪಿಡಿಒ ಅಮಾನತು

ABOUT THE AUTHOR

...view details