ಬೇಲೂರು:ಟಿಪ್ಪರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.
ಟಿಪ್ಪರ್ - ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - hassan crime news
ಚಿಕ್ಕನಾಯಕನ ಹಳ್ಳಿ ಬಳಿಯ ಮೂಡಿಗೆರೆ ರಸ್ತೆಯಲ್ಲಿ ಟಿಪ್ಪರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ದಾರುಣ ಘಟನೆ
ತೇಗೂರು ಗ್ರಾಮದ ವಸಂತರಾಜ್ (35) ಸಾವಿಗೀಡಾದ ಮೃತ ದುರ್ದೈವಿ. ಚಿಕ್ಕನಾಯಕನ ಹಳ್ಳಿ ಬಳಿಯ ಮೂಡಿಗೆರೆ ರಸ್ತೆಯಲ್ಲಿ ಮರಳು ತುಂಬಿದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಇನ್ನು ಅಪಘಾತಕ್ಕೆ ಟಿಪ್ಪರ್ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.