ಹಾಸನ:ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಇನ್ನೊಂದೇ ದಿನ ಬಾಕಿ ಇರುವುದರಿಂದ ಜಿಲ್ಲಾಡಳಿತ ಸಾರ್ವಜನಿಕರಿಗೆ ದರ್ಶನ ಭಾಗ್ಯ ಕಲ್ಪಿಸಿದೆ.
ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಪ್ರತಿ ವರ್ಷದಂತೆ ಈ ವರ್ಷವೂ ಹಾಸನಾಂಬೆ ದೇವಾಲಯ ಬಾಗಿಲು ತೆರೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಾರಿ ಸಾರ್ವಜನಿಕರಿಗೆ ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿರಲಿಲ್ಲ. ನಗರದ 10 ಕಡೆ ಎಲ್ಇಡಿ ಪರದೆ ಮೂಲಕ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು.
ದರ್ಶನಕ್ಕೆ ಕೊನೆಯ ದಿನವಾದ ಇಂದು ಸಾರ್ವಜನಿಕರಿಗೆ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಇಂದು ಬೆಳಗ್ಗೆ 6 ಗಂಟೆಯಿಂದ ದೇವಿ ದರ್ಶನ ಪಡೆಯುತ್ತಿದ್ದಾರೆ. ದೇವಾಲಯದ ಸಮೀಪ ಬಂದ ಎಲ್ಲರಿಗೂ ದರ್ಶನ ಭಾಗ್ಯ ಕಲ್ಪಿಸಲಾಗಿದ್ದು, ನಾಳೆ ಮಧ್ಯಾಹ್ನ 12 ಗಂಟೆಗೆ ಸಂಪ್ರದಾಯದಂತೆ ದೇವಾಲಯದ ಬಾಗಿ ಹಾಕಲು ಸಿದ್ಧಗೊಳಿಸಲಾಗಿದೆ.
ಇಂದು ಭಾನುವಾರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಿ ದರ್ಶನಕ್ಕೆ ಆಗಮಿಸುತ್ತಿದ್ದಾರೆ.