ಹಾಸನ: ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.
ಬೈಕ್ಗಳ ನಡುವೆ ಡಿಕ್ಕಿ: ಓರ್ವ ಸವಾರ ಸಾವು - ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ
ಬೇಲೂರು ತಾಲೂಕಿನ ಬಿಕ್ಕೋಡು ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ
ಜಾವೀದ್ (55) ಸ್ಥಳದಲ್ಲೇ ಮೃತಪಟ್ಟ ದ್ವಿಚಕ್ರ ವಾಹನ ಸವಾರ ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ ಬಿಕ್ಕೋಡು ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪಲ್ಸರ್ ಬೈಕ್ ಸವಾರನ ನಿರ್ಲಕ್ಷ್ಯ ಮತ್ತು ಅಜಾಗರೂಕತೆ ಜೊತೆಗೆ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಸವಾರ ಜಾವೀದ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಇನ್ನು ಸ್ಥಳಕ್ಕೆ ಬೇಲೂರು ಪಟ್ಟಣ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೇಲೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.