ಅರಸೀಕೆರೆ (ಹಾಸನ): ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಬೈಕಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಅಜ್ಜ ಹಾಗೂ ಮೊಮ್ಮಗಳು ಸಾವಿಗೀಡಾದ ಘಟನೆ ಜಿಲ್ಲೆಯ ಕಮಲಾಪುರ ಸಮೀಪ ಸಂಭವಿಸಿದೆ.
ತಾಲೂಕಿನ ಜಾವಗಲ್ ಹೋಬಳಿ ಕಲ್ಯಾಡಿ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಒಂದನೇ ತರಗತಿಯಲ್ಲಿ ಓದುತ್ತಿದ್ದ ನಾಗಲಕ್ಷ್ಮಿ (7) ತನ್ನ ಅಜ್ಜ ನಾಗರಾಜ್ (62) ಜೊತೆ ಬೈಕಿನಲ್ಲಿ ತೆರಳುತ್ತಿದ್ದಳು. ಈ ವೇಳೆ ಎದುರಿನಿಂದ ಬಂದ ಆಟೋ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.