ಕರ್ನಾಟಕ

karnataka

ಬಿಜೆಪಿ ತೊರೆದು ಯಾರೂ ಕಾಂಗ್ರೆಸ್ ಸೇರುವುದಿಲ್ಲ: ಕೇಂದ್ರ ಸಚಿವ ಭಗವಂತ್ ಖೂಬಾ

By ETV Bharat Karnataka Team

Published : Aug 27, 2023, 11:04 PM IST

ಕೆಲ ಶಾಸಕರು ಕ್ಷೇತ್ರದ ಸಮಸ್ಯೆಗಳನ್ನು ಇಟ್ಟುಕೊಂಡು ಸಿಎಂ ಮತ್ತು ಸಂಬಂಧಪಟ್ಟ ಸಚಿವರನ್ನ ಭೇಟಿ ಮಾಡಿ ಚರ್ಚೆ ನಡೆಸುವುದು ಸಾಮಾನ್ಯ. ಇದರಲ್ಲಿ ವಿಶೇಷ ಅರ್ಥವೇನು ಇಲ್ಲ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ಹೇಳಿದರು.

union-minister-bhagwant-khooba-reaction-on-bjp-mlas-joining-of-congress
ಬಿಜೆಪಿ ತೊರೆದು ಯಾರು ಕಾಂಗ್ರೆಸ್ ಸೇರುವುದಿಲ್ಲ: ಕೇಂದ್ರ ಸಚಿವ ಭಗವಂತ್ ಖೂಬಾ

ಕೇಂದ್ರ ಸಚಿವ ಭಗವಂತ್ ಖೂಬಾ

ಹಾಸನ: ಬಿಜೆಪಿ ತೊರೆದು ಯಾರು ಕಾಂಗ್ರೆಸ್ ಸೇರುವುದಿಲ್ಲ. ಸಮಸ್ಯೆಗಳನ್ನಿಟ್ಟುಕೊಂಡು ಸಿಎಂ ಬಳಿ ಶಾಸಕರು ಹೋಗುವುದು ಸಹಜ. ಚಂದ್ರಯಾನ-3 ಕ್ರೆಡಿಟ್ ಕಾಂಗ್ರೆಸ್ ಪಕ್ಷಕ್ಕಲ್ಲ, ಇಸ್ರೋ ವಿಜ್ಞಾನಿಗಳಿಗೆ ಸೇರುತ್ತದೆ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ತಿಳಿಸಿದರು. ನಗರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ಪಕ್ಷವನ್ನು ತೊರೆದು ಯಾವ ನಾಯಕರು ಕೂಡ ಕಾಂಗ್ರೆಸ್ ಸೇರುವುದಿಲ್ಲ ಎಂದು ಹೇಳಿದರು.

ಕೆಲ ಶಾಸಕರು ಕ್ಷೇತ್ರದ ಸಮಸ್ಯೆಗಳನ್ನು ಇಟ್ಟುಕೊಂಡು ರಾಜ್ಯದ ಮುಖ್ಯಮಂತ್ರಿಗಳ ಮತ್ತು ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸುವುದು ಸಾಮಾನ್ಯ. ಇದರಲ್ಲಿ ವಿಶೇಷ ಅರ್ಥವೇನು ಇಲ್ಲ, ನಮ್ಮ ಪಕ್ಷವನ್ನು ತೊರೆದು ಯಾರೂ ಕಾಂಗ್ರೆಸ್ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದು ಒಂಬತ್ತುವರೆ ವರ್ಷದಲ್ಲಿ ರೈತರಿಗೆ ಸಮಸ್ಯೆ ಆಗದಂತೆ ಸಬ್ಸಿಡಿ ದರದಲ್ಲಿ ರಸಗೊಬ್ಬರಗಳನ್ನ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮಳೆಯ ಕೊರತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮೀಕ್ಷೆ ನಡೆಸುತ್ತಿದ್ದು, ಬರಪೀಡಿತ ತಾಲೂಕುಗಳನ್ನ ಘೋಷಣೆ ಮಾಡಲಿದೆ ಎಂದು ಹೇಳಿದರು.

ಕಾಂಗ್ರೆಸ್ ನವರು ಕೇವಲ ಸಣ್ಣ ಮನಸ್ಥಿತಿಯಿಂದ ಅಂತರವನ್ನು ಹುಡುಕುವ ಕೆಲಸದಲ್ಲೇ ಕಾಲ ಕಳೆಯುತ್ತಿದ್ದಾರೆ. ಮೋದಿಯವರು ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು. ಅವರು ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ಅವರನ್ನು ನೋಡಲು ಮತ್ತು ಬರಮಾಡಿಕೊಳ್ಳಲು ಉತ್ಸುಕರಾಗಿರುತ್ತಾರೆ. ಆದರೆ ಕಾಂಗ್ರೆಸ್ ನವರಿಗೆ ಅಹಂಕಾರದ ಭಾವನೆಯಲ್ಲಿರುವಂತಹ ಪಕ್ಷದವರಿಂದ ಬೇರೇನೂ ನಿರೀಕ್ಷೆ ಮಾಡಲು ಸಾಧ್ಯ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ರಾಜಕೀಯ ಸೇಡು ತೀರಿಸಿಕೊಳ್ಳುವ ಹುನ್ನಾರ: ವಿಚಾರಣಾ ಆಯೋಗ ರಚನೆಗೆ ಬೊಮ್ಮಾಯಿ ಕಿಡಿ

ABOUT THE AUTHOR

...view details