ಹಾಸನ: ನಗರದ ಎಪಿಎಂಸಿಯ ಈರುಳ್ಳಿ ಮಂಡಿಯಲ್ಲಿ ಅಪರಿಚಿತನ ಶವ ಪತ್ತೆಯಾಗಿದೆ. ನಗರದಲ್ಲಿ ಮತ್ತೊಂದು ಅಪರಿಚಿತ ಶವ ಪತ್ತೆಯಾಗಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಹಾಸನ ಎಪಿಎಂಸಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ... ಕೊಲೆ ಶಂಕೆ - Hassan double murder
ಹಾಸನದಲ್ಲಿ ಮತ್ತೊರ್ವ ಅಪರಿಚಿತನ ಶವ ಪತ್ತೆಯಾಗಿದ್ದು, ಜನ ಆತಂಕಗೊಂಡಿದ್ದಾರೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗುತ್ತಿದೆ. ಇನ್ನು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ
ಎಪಿಎಂಸಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ...ಕೊಲೆ ಶಂಕೆ
ಅಪರಿಚಿತನ ಮುಖ ಹಾಗೂ ಕೈ ಮೇಲೆ ರಕ್ತ ಹಾಗೂ ಗಾಯದ ಗುರುತು ಪತ್ತೆಯಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಅಥವಾ ಕುಡಿದ ಮತ್ತಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಾಸನ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಸನ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸರಿಗೆ ತಲೆನೋವಾಗಿದೆ.