ಹಾಸನ:ಹೇಮಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.
ಹೇಮಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - kannadanews
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾಗಲು ಗ್ರಾಮದ ಸಮೀಪದಲ್ಲಿ ಹರಿಯುವ ಹೇಮಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಸುಮಾರು 45 ರಿಂದ 48 ವಯೋಮಾನದ ಪುರುಷನ ಶವ ಪತ್ತೆಯಾಗಿದ್ದು, ಮೈ ಮೇಲೆ ತರಚಿದ ಗಾಯಗಳಾಗಿವೆ. ಜಾನುವಾರುಗಳಿಗೆ ನೀರು ಕುಡಿಸಲು ಹೋದ ಸಂದರ್ಭದಲ್ಲಿ ಸ್ಥಳೀಯರಿಗೆ ಮೃತದೇಹ ತೇಲುತ್ತಿರುವ ದೃಶ್ಯ ಕಂಡಿದ್ದು, ತಕ್ಷಣ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಸಕಲೇಶಪುರ ತಾಲೂಕಿನ ಮಾಗಲು ಗ್ರಾಮದ ಸಮೀಪದಲ್ಲಿ ಹರಿಯುವ ಹೇಮಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸತ್ತಿರುವ ವ್ಯಕ್ತಿ ಯಾರು ಎಂಬುದು ತಿಳಿದುಬಂದಿಲ್ಲ.
ಈ ಸಂಬಂಧ ಹೆಸರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಪಟ್ಟವರು ಯಸಳೂರು ಪೊಲೀಸ್ ಠಾಣೆಯನ್ನ ಸಂಪರ್ಕಿಸಲು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.