ಕರ್ನಾಟಕ

karnataka

ETV Bharat / state

ಹಾಸನ: ಯಗಚಿ ನದಿ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - Hassan Rural Police Station case

ಹಾಸನ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳು ಮೂಡಿವೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.

dsd
ಹಾಸನ ಯಗಚಿ ನದಿ ಬಳಿ ಅಪರಿಚಿತ ಶವ ಪತ್ತೆ

By

Published : Sep 5, 2020, 1:46 PM IST

ಹಾಸನ: ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿಂದ ಕೊಲೆ ಮತ್ತು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗುತ್ತಿದ್ದು, ಇಂದು ಮತ್ತೊಂದು ಅಪರಿಚಿತನ ಶವ ಪತ್ತೆಯಾಗಿದೆ.

ತಾಲೂಕಿನ ಮೇದರಹಳ್ಳಿ ಬಳಿಯ ಯಗಚಿ ನದಿಯಲ್ಲಿ ಸುಮಾರು 55 ವರ್ಷ ಆಸುಪಾಸಿನ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details