ಸಕಲೇಶಪುರ: ನಿಗದಿತ ಕಾಲಮಿತಿಯೊಳಗೆ ಗುಂಪು ಸೇರದೆ ವ್ಯಾಪಾರ ವಹಿವಾಟು ನಡೆಸಬೇಕು. ಅನಗತ್ಯ ಸಂಚಾರಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಾಲೂಕು ದಂಡಾಧಿಕಾರಿ ಮಂಜುನಾಥ್ ಎಚ್ಚರಿಸಿದರು.
ಪಟ್ಟಣದ ವಿವಿಧೆಡೆ ಅಗತ್ಯ ವಸ್ತುಗಳ ಮಾರಾಟದ ಅಂಗಡಿಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ಅಗತ್ಯ ವಸ್ತುಗಳಾದ ಸಾನಿಟೈಸರ್, ಮಾಸ್ಕ್, ತರಕಾರಿ, ಹಣ್ಣು ಸೇರಿ ದಿನಸಿ ವಸ್ತುಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದವರ ವಿರುದ್ಧವೂ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.