ಕರ್ನಾಟಕ

karnataka

ETV Bharat / state

ಹಾಸನ: ಅರೇಹಳ್ಳಿ ಗ್ರಾಮ ಪಂಚಾಯಿತಿ ಲೆಕ್ಕಿಗ ನೇಣಿಗೆ ಶರಣು - ಹಾಸನ ಸುದ್ದಿ

ಅರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಲೆಕ್ಕಿಗನಾಗಿ ಕಾರ್ಯನಿರ್ವಹಿಸುತ್ತಿದ್ದ ಬೈರಾಪುರದ ಬಸವರಾಜು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

beluru
ಗ್ರಾಮ ಪಂಚಾಯಿತಿ ಲೆಕ್ಕಿಗ ಬಸವರಾಜು

By

Published : Sep 20, 2021, 12:07 PM IST

ಹಾಸನ(ಬೇಲೂರು): ಅರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಲೆಕ್ಕಿಗನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಬೇಲೂರು ಪಟ್ಟಣದ ನೆಹರೂ ನಗರದಲ್ಲಿ ನಡೆದಿದೆ.

ಅರಕಲಗೂಡು ತಾಲೂಕಿನ ಬೈರಾಪುರದ ಬಸವರಾಜು (46)ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇತ್ತೀಚಿಗೆ ಇವರು ಅರಕಲಗೂಡಿನಲ್ಲಿ ಕರ್ತವ್ಯ ನಿರ್ವಹಿಸಿ ಬೇಲೂರಿಗೆ ವರ್ಗಾವಣೆ ಆಗಿದ್ದರು. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ABOUT THE AUTHOR

...view details