ಹಾಸನ: ಹಳ್ಳಿಗಳಲ್ಲಿ ನಡೆಯುತ್ತಿರುವ ದೌರ್ಜನ್ಯ ತಡೆಯಲು 24 ಗಂಟೆಗಳ ಕಾಲ ಪೊಲೀಸ್ ಸಿಬ್ಬಂದಿ ನೇಮಿಸುವಂತೆ ಆಗ್ರಹಿಸಿ ಅಖಿಲ ಭಾರತ ಡಾ. ಬಿ.ಆರ್. ಅಂಬೇಡ್ಕರ್ ಸೈನ್ಯದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ಹಳ್ಳಿಗಳಲ್ಲಿ ದೌರ್ಜನ್ಯ ತಡೆಗೆ ಪೊಲೀಸ್ ಸಿಬ್ಬಂದಿ ನೇಮಿಸುವಂತೆ ಮನವಿ
ಹಾಸನ ಜಿಲ್ಲೆಯ ವ್ಯಾಪ್ತಿಯ 8 ತಾಲೂಕುಗಳ ವ್ಯಾಪ್ತಿಯಲ್ಲಿ ಪ್ರತಿಯೊಂದು ಹಳ್ಳಿಗಳಲ್ಲಿ ಮಹಿಳೆಯರ ಮೇಲೆ ಹಾಗೂ ಬಡ ಜನರ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.
ಹಳ್ಳಿಗಳಲ್ಲಿ ನಡೆಯುತ್ತಿರುವ ದೌರ್ಜನ್ಯ ತಡೆಯಲು ಪೊಲೀಸ್ ಸಿಬ್ಬಂದಿ ನೇಮಿಸುವಂತೆ ಮನವಿ
ಹಾಸನ ಜಿಲ್ಲೆಯ ವ್ಯಾಪ್ತಿಯ 8 ತಾಲೂಕುಗಳ ಮಿತಿಯಲ್ಲಿ ಪ್ರತಿಯೊಂದು ಹಳ್ಳಿಗಳಲ್ಲಿ ಮಹಿಳೆಯರ ಮೇಲೆ ಹಾಗೂ ಬಡ ಜನರ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆಯು ಸೂಕ್ತ ಕ್ರಮ ಕೈಗೊಂಡು ತಕ್ಷಣ ಪ್ರತಿ ಹಳ್ಳಿಗಳಿಗೆ ಸಿಸಿ ಕ್ಯಾಮರಾಗಳನ್ನು ಅಳವಡಿಸುವುದರ ಮೂಲಕ ದೌರ್ಜನ್ಯ ಎಸಗುವ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದರು.
ಪೊಲೀಸ್ ಇಲಾಖೆಯಿಂದ ಪ್ರತಿ ಹಳ್ಳಿಗೂ ಒಬ್ಬೊಬ್ಬ ಸಿಬ್ಬಂದಿಯನ್ನು ದಿನದ 24 ಗಂಟೆ ನೇಮಿಸಿ ಜನತೆಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಿದರು.