ಕರ್ನಾಟಕ

karnataka

ETV Bharat / state

ಮಧ್ಯರಾತ್ರಿ ನದಿ ಪಾತ್ರದ ಪ್ರದೇಶಗಳಿಗೆ ನುಗ್ಗಿದ ನೀರು.. ನೋಡ ನೋಡುತ್ತಿದ್ದಂತೆ ಕುಸಿತ ಕಂಡ ಮನೆಗಳು.. - hassan latest news

ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಟ್ಟಿರುವ ಕಾರಣ ಶುಕ್ರವಾರ ಮಧ್ಯರಾತ್ರಿ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿದ್ದು,ಇಂದು ನಾಲ್ಕೈದು ಮನೆಗಳು ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದಿವೆ.

ಮಧ್ಯರಾತ್ರಿ ನದಿ ಪಾತ್ರದ ಮನೆಗಳಿಗೆ ನುಗ್ಗಿದ ನೀರು..ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಮನೆಗಳು

By

Published : Aug 11, 2019, 5:54 PM IST

ಹಾಸನ:ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಟ್ಟಿರುವ ಕಾರಣ ಶುಕ್ರವಾರ ಮಧ್ಯರಾತ್ರಿ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿದೆ.

ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಮನೆಗಳು..

ಯಾಸಿನ್‌ನಗರ, ಕೆಎನ್‌ಎ ಬಡಾವಣೆಯಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಇನ್ನೂ ಹೆಚ್ಚಿನ ನೀರನ್ನು ಬಿಡುವ ಕಾರಣ ಸ್ಥಳೀಯರು ತಮ್ಮ ವಸ್ತುಗಳನ್ನು ತೆಗೆದುಕೊಂಡು ಆಶ್ರಯ ಕೇಂದ್ರ ಅಥವಾ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪಟ್ಟಣದೊಳಗೆ ಭಾರಿ ಪ್ರಮಾಣದ ನೀರು ಬರುತ್ತಿರುವ ಕಾರಣ, ಇಂದು ನಾಲ್ಕೈದು ಮನೆಗಳು ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದಿವೆ. ಸ್ಥಳೀಯರು ಸುರಕ್ಷಿತ ಹಾಗೂ ಗಂಜಿ ಕೇಂದ್ರಗಳಿಗೆ ತೆರಳಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ABOUT THE AUTHOR

...view details