ಚನ್ನರಾಯಪಟ್ಟಣ:ತಾಲೂಕಿನ ನವೋದಯ ವಿದ್ಯಾಸಂಸ್ಥೆಯ ಆವರಣದಲ್ಲಿ ನವೆಂಬರ್ 10ರಂದು ಯುವ ಕಾಂಗ್ರೆಸ್ ಆರೋಗ್ಯ ಮೇಳ ಆಯೋಜಿಸಿದೆ. ಬಡವರು, ವೃದ್ಧರು ಈ ಮೇಳವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಸಿ ಎಸ್ ಪುಟ್ಟೇಗೌಡ ಹೇಳಿದರು.
ಏತ ನೀರಾವರಿ ಮೂಲಕ ಹಾಸನ ಕೆರೆಗಳಿಗೆ ನೀರು.. ಮಾಜಿ ಶಾಸಕ ಸಿ ಎಸ್ ಪುಟ್ಟೇಗೌಡ - ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ
ಚನ್ನರಾಯಪಟ್ಟಣ ತಾಲೂಕಿನ ನವೋದಯ ವಿದ್ಯಾಸಂಸ್ಥೆಯ ಆವರಣದಲ್ಲಿ ನವೆಂಬರ್ 10 ರಂದು ಯುವ ಕಾಂಗ್ರೆಸ್ ಆರೋಗ್ಯ ಮೇಳ ಆಯೋಜಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮೇಳ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಯು ಟಿ ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗಮಿಸಲಿದ್ದಾರೆ. 30 ಮಂದಿ ಸೂಪರ್ ಸ್ಪೆಷಾಲಿಟಿ ವೈದ್ಯರು, 20 ಮಂದಿ ಸ್ಥಳೀಯ ವೈದ್ಯರು ರೋಗಿಗಳನ್ನು ಪರೀಕ್ಷಿಸಲಿದ್ದಾರೆ ಎಂದು ಹೇಳಿದರು.
ನುಗ್ಗೇಹಳ್ಳಿ ಏತ ನೀರಾವರಿ ಯೋಜನೆಯಡಿ ನೀರು ಹರಿಸುವ ಮೂಲಕ ಬಿಜೆಪಿ ಸರ್ಕಾರ ತಾಲೂಕಿನ ನೀರಿನ ಬವಣೆಯನ್ನು ನಿವಾರಿಸುವಲ್ಲಿ ಮುಂದಾಗಿದೆ. ಅಗಸ್ಟ್ 6ರಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರು ಏತ ನೀರಾವರಿ ಯೋಜನೆ ಕಾಮಗಾರಿ ಪರಿಶೀಲಿಸಿದ್ದರು. ಕೆಲ ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸದ್ಯದಲ್ಲೇ ಮುಖ್ಯಮಂತ್ರಿ ಉದ್ಘಾಟನೆ ಮಾಡಲಿದ್ದಾರೆ ಎಂದರು.