ಹಾಸನ:ಹಲ್ಮಿಡಿ ಶಾಸನವು ಕನ್ನಡ ಭಾಷೆಯಲ್ಲಿ ಸಿಕ್ಕಿರುವ ಅತ್ಯಂತ ಹಳೆಯ ಮತ್ತು ಮೊದಲ ಶಾಸನ. ಸ್ಥಳೀಯರ ಅಸಡ್ಡೆಯಿಂದ ಹಲ್ಮಿಡಿ ಗ್ರಾಮ ಪಾಳು ಬಿದ್ದ ಕೊಂಪೆಯಂತಾಗಿದೆ. ಶೀಘ್ರದಲ್ಲೇ ಗ್ರಾಮದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಭರವಸೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮದ ಅಭಿವೃದ್ದಿಗೆ ಸಂಬಂಧಿಸಿದಂತೆ ಅನುದಾನ ಬಿಡುಗಡೆ ಮಾಡಿಸುವೆ. ಖಾಸಗಿ ಸಹಭಾಗಿತ್ವದಲ್ಲಿ ಪ್ರಮುಖ ಪ್ರವಾಸೋದ್ಯಮ ಸ್ಥಳಗಳನ್ನು ಉನ್ನತಮಟ್ಟದಲ್ಲಿ ಅಭಿವೃದ್ಧಿಪಡಿಸುವ ಚಿಂತನೆ ಇದೆ ಎಂದು ಹೇಳಿದರು.
ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದೆ. ಭಾರತದಲ್ಲಿ ಪ್ರವಾಸಿಗರು ವರ್ಷದಲ್ಲಿ 5 ಸ್ಥಳಗಳಿಗೆ ಭೇಟಿ ನೀಡಿದರೆ ಸಾಕು ಅದಾಗಿಯೇ ಬದಲಾವಣೆಯಾಗುತ್ತದೆ ಎಂದು ಆ.15 ರಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಲ್ಲದೆ, ಇದರಿಂದ ದೊಡ್ಡಮಟ್ಟದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ತಿಳಿಸಿದರು.
ಪುರಾತತ್ವ ಇಲಾಖೆಯ ಪ್ರಕಾರ ರಾಜ್ಯದಲ್ಲಿ 844 ಪ್ರವಾಸಿ ಸ್ಥಳಗಳನ್ನ ತನ್ನ ವಶದಲ್ಲಿಟ್ಟುಕೊಂಡಿದೆ. ರಾಜ್ಯದ ಎಲ್ಲಾ ಕಡೆ ಪ್ರವಾಸ ಮಾಡಿ 41 ಸಮಗ್ರ ಕೇಂದ್ರಗಳನ್ನ ಗುರುತಿಸಲಾಗಿದೆ. ಇನ್ನು ಅರಣ್ಯಾ ಇಲಾಖೆ ಪ್ರದೇಶದಲ್ಲಿರುವ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುಮತಿ ಬೇಕಿದೆ. ಈ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸುತ್ತೇನೆ ಎಂದರು.