ಕರ್ನಾಟಕ

karnataka

ETV Bharat / state

ಅನಾರೋಗ್ಯದಿಂದ ಸಾವನ್ನಪ್ಪಿದ ಮಹಿಳೆಯ ಕೊರೊನಾ‌ ವರದಿ ಪಾಸಿಟಿವ್ - Arakalagudu news

ಅನಾರೋಗ್ಯದಿಂದ ಸಾವನ್ನಪ್ಪಿದ ಮಹಿಳೆಯ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಆಕೆಯ ವಾರ್ಡ್‌ನ ಎಲ್ಲಾ ಮನೆಯವರ ಗಂಟಲು ದ್ರವವನ್ನು ತೆಗೆದು ಪರೀಕ್ಷೆಗೆ ಕಳುಹಿಸಲಾಗಿದೆ.

Arakalagudu hospital
Arakalagudu hospital

By

Published : Aug 7, 2020, 3:22 PM IST

ಅರಕಲಗೂಡು:ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಆಕೆಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಈ ಘಟನೆ ಅರಕಲಗೂಡು ಪಟ್ಟಣದ ವಿನಾಯಕ ನಗರದ ಕೋಟೆಯಲ್ಲಿ ನಡೆದಿದೆ. 45 ವರ್ಷದ ಮಹಿಳೆ ಮೃತಪಟ್ಟಿದ್ದು, ಅನಾರೋಗ್ಯದಿಂದ ಬಳಲಿದ್ದ ಈಕೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು. ಮೂರ್ನಾಲ್ಕು ದಿನಗಳಿಂದ ಮನೆಯಲ್ಲಿ ಇದ್ದ ಈಕೆ ಉಸಿರಾಟ ಮತ್ತು ಜ್ವರದಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ.

ನಿನ್ನೆ ಸಂಜೆ ಮಹಿಳೆ ಮೃತಪಟ್ಟಿದ್ದು, ಸಾವಿನ ಬಳಿಕ ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಗೆ ಜ್ವರ ಮತ್ತು ಉಸಿರಾಟದ ತೊಂದರೆ ಜೊತೆಗೆ ಕೊರೊನಾ ಪಾಸಿಟಿವ್ ಇದೆ ಎಂಬುದು ತಿಳಿದಿದೆ. ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಇಂದು ಆಕೆಯ ಅಂತ್ಯಕ್ರಿಯೆ ನಡೆಯಲಿದೆ.

ಮೃತದೇಹವನ್ನು ಸಾಗಿಸಲು ಯಾವುದೇ ಆ್ಯಂಬುಲೆನ್ಸ್ ವ್ಯವಸ್ಥೆ ಇಲ್ಲದೆ ರಾತ್ರಿ ವೇಳೆ ಪರದಾಡುವ ಪರಿಸ್ಥಿತಿ ಎದುರಾಗಿತ್ತು. ತಮ್ಮ ಸ್ವಂತ ಕಾರಿನಲ್ಲಿ ಮೃತದೇಹವನ್ನು ಸಾಗಿಸಿ ಕೀರ್ತಿ ಕುಮಾರ್ ಮಾನವೀಯತೆ ಮೆರೆದಿದ್ದಾರೆ. ವಾರ್ಡ್ ನ ಎಲ್ಲಾ ಮನೆಯವರ ಗಂಟಲು ದ್ರವವನ್ನು ತೆಗೆದು ಪರೀಕ್ಷೆಗೆ ಕಳುಹಿಸಲಾಗಿದೆ.

ABOUT THE AUTHOR

...view details