ಕರ್ನಾಟಕ

karnataka

ETV Bharat / state

ಪೂಜಾರಿಯ ಬೆತ್ತದೇಟಿಗೆ ಮಹಿಳೆ ಮೃತಪಟ್ಟ ಆರೋಪ : ಕಾರಣ ಕೇಳಿದ್ರೆ ಶಾಕ್ ಆಗ್ತೀರಾ! - ಪೂಜೆ ವೇಳೆ ಪೂಜಾರಿ ಬೆತ್ತದ ಏಟು

ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಹೀಗಾಗಿ, ದೇವರ ಮೊರೆ ಹೋಗಿದ್ದರು. ಪೂಜೆ ಮಾಡಿ ತಲೆನೋವು ಗುಣಪಡಿಸುವುದಾಗಿ ಹೇಳಿ ಮಹಿಳೆ ತಲೆಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾರೆ. ಇದರ ಪರಿಣಾಮವಾಗಿ ಮಹಿಳೆ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ..

pujari-beaten-death-woman-in-hassan
ಪೂಜಾರಿಯ ಬೆತ್ತದೇಟಿಗೆ ಮಹಿಳೆ ಸಾವು ಆರೋಪ

By

Published : Dec 11, 2021, 2:01 PM IST

ಹಾಸನ : ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಪಾರ್ವತಿ (47) ಎಂಬುವರು ಮೃತಪಟ್ಟ ಮಹಿಳೆ. ಕಳೆದ ಕೆಲ ದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ.

ಹೀಗಾಗಿ, ದೇವರ ಮೊರೆ ಹೋಗಿದ್ದರು. ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ಹಿರಿಯಾಪಟ್ಟಣದಮ್ಮ ದೇವರ ಪೂಜಾರಿ ತಿಳಿಸಿದ್ದನಂತೆ.

ನಂತರ ಪೂಜೆ ಮಾಡಿ ತಲೆನೋವು ಗುಣಪಡಿಸುವುದಾಗಿ ಹೇಳಿ ಮಹಿಳೆ ತಲೆಗೆ ಬೆತ್ತದಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ಪರಿಣಾಮ ಮಹಿಳೆ ಅಸ್ವಸ್ಥಗೊಂಡಿದ್ದರು. ತೀವ್ರ ಅಸ್ವಸ್ಥಗೊಂಡ ಪಾವರ್ತಿಯವರು ಚಿಕಿತ್ಸೆ ಫಲಕಾರಿಯಾಗದೇ ಹಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆ ನಂತರ ಪೂಜಾರಿ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ABOUT THE AUTHOR

...view details