ಹಾಸನ: ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದ ಮಹಿಳೆವೋರ್ವಳು ಕೆಎಸ್‌ಆರ್‌ಟಿಸಿ ಬಸ್‌ಗೆ ಅಡ್ಡಲಾಗಿ ಮಲಗಿ ರಂಪಾಟ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
ಹಾಸನ ಬಸ್ ನಿಲ್ದಾಣಲ್ಲಿ ಮಹಿಳೆಯ ರಂಪಾಟ - ವಿಡಿಯೋ - ಹಾಸನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ
ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದ ಮಹಿಳೆವೋರ್ವಳು ಕೆಎಸ್‌ಆರ್‌ಟಿಸಿ ಬಸ್‌ಗೆ ಅಡ್ಡಲಾಗಿ ಮಲಗಿ ರಂಪಾಟ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಬಸ್ ನಿಲ್ದಾಣಲ್ಲಿ ಮಹಿಳೆಯ ರಂಪಾಟ
ಎಸ್‌ಪಿ ಕಚೇರಿ ಸಮೀಪ ಮಹಿಳೆವೋರ್ವಳು ತನಗೆ ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಹೆದರಿಸುತ್ತಾ ರಸ್ತೆಯಲ್ಲೇ ಬಿದ್ದು ಹೊರಳಾಡಿದ್ದಾಳೆ. ಮಹಿಳೆ ಅಡ್ಡ ಬಂದ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ ಡ್ರೈವರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಕೆಳಗೆ ಅಡ್ಡಲಾಗಿ ಮಲಗಿದ ಮಹಿಳೆ ಬಸ್ ಮುಂದೆ ಹೋಗದಂತೆ ತಡೆದಿದ್ದಾಳೆ.
ವಿಷ್ಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರಿಗೂ ಮಹಿಳೆಯ ರಂಪಾಟ ನಿಯಂತ್ರಣ ಸಾಧ್ಯವಾಗಿಲ್ಲ. ಇದರಿಂದಾಗಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ. ಅಂತಿಮವಾಗಿ ಆ್ಯಂಬುಲೆನ್ಸ್ ಕರೆಸಿ ಮಹಿಳೆಯನ್ನು ಆಸ್ಪತ್ರೆಗೆ ಬಲವಂತವಾಗಿ ಕರೆದೊಯ್ಯಲಾಗಿದೆ.
Last Updated : Sep 24, 2020, 6:03 PM IST