ಕರ್ನಾಟಕ

karnataka

ETV Bharat / state

ಹೊಳೆನರಸೀಪುರದಲ್ಲಿ ಹರಿದ ನೆತ್ತರು.. ಮಾಸ್ಕ್​ ಧರಿಸಿದ್ದ ದುಷ್ಕರ್ಮಿಗಳಿಂದ ಮಹಿಳೆಯ ಕತ್ತು ಸೀಳಿ ಕೊಲೆ - ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ

ಮಹಿಳೆಯ ಕತ್ತು ಸೀಳಿ ಬರ್ಬರ ಕೊಲೆ-ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ಘಟನೆ-ಮಾಸ್ಕ್ ಧರಿಸಿದ್ದ ಇಬ್ಬರು ದುಷ್ಕರ್ಮಿಗಳಿಂದ ಹತ್ಯೆ

woman was brutally murdered by slitting her throat
ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಕೊಲೆ

By

Published : Dec 24, 2022, 5:57 PM IST

ಹಾಸನ: ಮಹಿಳೆಯೊಬ್ಬರ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ(50)ಕೊಲೆಯಾದ ಮಹಿಳೆ, ಮಾಸ್ಕ್ ಧರಿಸಿದ ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಬಂದು ಮನೆಗೆ ನುಗ್ಗಿ ಏಕಾಏಕಿ ಮಹಿಳೆಯ ಕತ್ತು ಕೊಯ್ದು ಪರರಿಯಾಗಿದ್ದಾರೆ.

ಶನಿವಾರ ಬೆಳಗ್ಗೆ 10ಗಂಟೆ ಸಮಯದಲ್ಲಿ ಹತ್ಯೆ ನಡೆದಿದೆ. ಕೊಲೆಯಾದ ಮಹಿಳೆಯ ಪತಿ ರಾಜೇಗೌಡ ಹೊರಗೆ ಹೋಗಿದ್ದಾಗ ಮನೆಯಲ್ಲಿ ಒಬ್ಬರೇ ಇದ್ದಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮಾಸ್ಕ್ ಧರಿಸಿದ್ದ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಹೋಗುವುದನ್ನು ಗ್ರಾಮಸ್ಥರು ಗಮನಿಸಿದ್ದಾರೆ.

ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಮತ್ತು ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇಸ್​ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ:ಮನೆಯ ಕಾರು ಚಾಲಕನಿಂದಲೇ ವೈದ್ಯೆ ಮೇಲೆ ಲೈಂಗಿಕ‌ ದೌರ್ಜನ್ಯ.. ಬೆಂಗಳೂರಲ್ಲಿ ದುಷ್ಕೃತ್ಯ

ABOUT THE AUTHOR

...view details