ಹಾಸನ: ಡ್ರಗ್ಸ್ ದಂಧೆ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ನಿಷ್ಪಕ್ಷಪಾತ ತನಿಖೆಗೆ ಬಿಜೆಪಿ ಯುವ ಮೋರ್ಚಾ ಒತ್ತಾಯ - yuva morcha protest
ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯದ ನೆಮ್ಮದಿ ಮತ್ತು ಹೆಸರು ಕೆಡಿಸಿರುವ ಮಾದಕ ವಸ್ತು ಮಾರಾಟ ಜಾಲ ಹಾಗೂ ಸೇವನೆಯ ವಿರುದ್ಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವು ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ. ಗೃಹ ಸಚಿವಾಲಯ ಹಾಗೂ ಪೊಲೀಸ್ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಹೇಳಿದರು.
ಮಾದಕ ದಂಧೆ ವಿರುದ್ಧ ಇದೇ ರೀತಿ ಕಠಿಣ ಕಾರ್ಯಾಚರಣೆ ಮುಂದುವರೆಸಬೇಕು. ಇದರಲ್ಲಿ ಭಾಗಿಯಾಗಿರುವ ಯಾವ ಪ್ರಭಾವಿಯಾಗದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಯಿತು.