ಹಾಸನ:ಜಮೀರ್ ಅಹಮ್ಮದ್ ಅವರೇ ನನ್ನನ್ನು ಬಿಜೆಪಿಗೆ ಹೋಗಿ ಅಂತಾ ಹೇಳಿದ್ದು, ಅವರಿಗೆ ಕಾಂಗ್ರೆಸ್ ಸರ್ಕಾರ ಇರೋದು ಇಷ್ಟ ಇರಲಿಲ್ಲ ಎಂದು ಸಚಿವ ಗೋಪಾಲಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಒಳ್ಳೆದಾಗುತ್ತೆ. ಹೀಗಾಗಿ ನನ್ನನ್ನ ಬಿಜೆಪಿಗೆ ಹೋಗು ಎಂದು ಜಮೀರ್ ಹೇಳಿದ್ರು ಎಂದ್ರು.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಗೋಪಾಲಯ್ಯ ಅವರನ್ನು ಬಿಜೆಪಿಗೆ ಕಳಿಸಿದ್ದು ನಾನೇ' ಎಂಬ ಜಮೀರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ನಾನು ಅವರು ಹಿಂದೆ ಜೆಡಿಎಸ್‌ನಲ್ಲಿದ್ದಾಗ ಒಳ್ಳೆಯ ಸ್ನೇಹಿತರಿದ್ದೆವು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಹೋಗಬೇಕು ಎನ್ನೋದು ಅವರ ಭಾವನೆಯಾಗಿತ್ತು. ಈ ರಾಜ್ಯದಲ್ಲಿ ಅಭಿವೃದ್ಧಿ ಆಗ್ತಿಲ್ಲ ಎಂಬುದು ಅವರ ಅಸಮಾಧಾನವಾಗಿತ್ತು. ಬಿಜೆಪಿ ಬಂದರೆ ರಾಜ್ಯದ ಅಭಿವೃದ್ಧಿಗೆ ಒಳ್ಳೆಯದು ಎಂಬ ಭಾವನೆ ಅವರದ್ದಾಗಿತ್ತು ಎಂದ್ರು.
ಉಪ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಒಂದೇ ಜಿಲ್ಲೆಯಲ್ಲಿ ನೆಲೆಸಿರುವ ಬಗ್ಗೆ ಕೆಲವರು ಅಪಸ್ವರ ವ್ಯಕ್ತಪಡಿಸಿರುವ ಕುರಿತು ಪ್ರಸ್ತಾಪಿಸಿದ ಅವರು, ಕಾಂಗ್ರೆಸ್ ನಾಯಕರಿಗೆ ಈಗಾಗಲೇ ನಡುಕ ಶುರುವಾಗಿದೆ.