ಹಾವೇರಿ: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ಮುಂಜಾಗ್ರತಾ ಹಾಗೂ ಸರಕ್ಷತಾ ಕ್ರಮಗಳಿಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ಎಪಿಎಂಸಿ ವತಿಯಿಂದ ಸರ್ಕಾರಕ್ಕೆ ಬರೋಬ್ಬರಿ ಒಂದು ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ.
ಕೊರೊನಾ ತಡೆಗೆ ಬ್ಯಾಡಗಿ ಪಟ್ಟಣದ ಎಪಿಎಂಸಿಯಿಂದ ಸರ್ಕಾರಕ್ಕೆ 1 ಕೋಟಿ ರೂ. ದೇಣಿಗೆ - ಒಂದು ಕೋಟಿ ರೂ. ದೇಣಿಗೆ
ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ಎಪಿಎಂಸಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂ. ದೇಣಿಗೆ ನೀಡಲಾಗಿದೆ.
ಎಪಿಎಂಸಿವತಿಯಿಂದ ಸರ್ಕಾರಕ್ಕೆ 1 ಕೋಟಿ ರೂ. ದೇಣಿಗೆ
ಪಟ್ಟಣದ ಎಪಿಎಂಸಿ ಮಾರುಕಟ್ಟೆ ಸದಸ್ಯರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರಕ್ಕೆ ಸಾಥ್ ನೀಡಿದ್ದಾರೆ.
ಅಲ್ಲದೇ ಸರ್ಕಾರದ ನಿರ್ದೇಶನದಂತೆ ಜನರು ನಡೆದುಕೊಳ್ಳಬೇಕು. ಕೊರೊನಾ ವೈರಸ್ ಕುರಿತು ನಿರ್ಲಕ್ಷ್ಯ ತೋರಬಾರದು ಎಂದು ಮನವಿ ಮಾಡಿದ್ದಾರೆ.