ಹಾವೇರಿ:ಜಿಲ್ಲೆಯಲ್ಲಿ ಕೊರೊನಾ ಎರಡನೇಯ ಅಲೆ ಆರಂಭವಾದಾಗಿನಿಂದ ಇಲ್ಲಿಯವರೆಗೆ 11 ಶಿಕ್ಷಕರು ಕೊರೊನಾಕ್ಕೆ ಬಲಿಯಾಗಿದ್ದಾರೆ ಎಂದು ಹಾವೇರಿ ಡಿಡಿಪಿಐ ಅಂದಾನೆಪ್ಪ ವಡಗೇರಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಿಕ್ಷಕರಿಗೆ ಕೊರೊನಾ ಬರದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಮೂರುವರೆ ಸಾವಿರ ಶಿಕ್ಷಕರಿಗೆ ಲಸಿಕಾಕರಣ ಮಾಡಲಾಗಿದೆ. ಜೊತೆಗೆ ಶಿಕ್ಷಕರಿಗೆ ಧೈರ್ಯ ತುಂಬುವ ಕೆಲಸವನ್ನು ಇಲಾಖೆ ಮಾಡುತ್ತಿದೆ. ಅಲ್ಲದೆ ಕೊರೊನಾಪೀಡಿತ ಶಿಕ್ಷಕರಿಗೆ ಹಾಸಿಗೆ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಿದ್ದೇವೆ ಎಂದರು.