ಹಾವೇರಿ:ಜಿಲ್ಲೆಯಲ್ಲಿ ಇಂದು ಹೊಸದಾಗಿ 111 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಇಂದು ಬ್ಯಾಡಗಿ ತಾಲೂಕಿನಲ್ಲಿ 13, ಹಾನಗಲ್ ತಾಲೂಕಿನಲ್ಲಿ 13, ಹಾವೇರಿ ತಾಲೂಕಿನಲ್ಲಿ 30, ಹಿರೇಕೆರೂರು ತಾಲೂಕಿನಲ್ಲಿ 11, ರಾಣೇಬೆನ್ನೂರು ತಾಲೂಕಿನಲ್ಲಿ 19, ಸವಣೂರು ತಾಲೂಕಿನಲ್ಲಿ 10 ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ 15 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2883ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ನಾಲ್ಕು ಮಂದಿ ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 66 ಕ್ಕೇರಿದಂತಾಗಿದೆ.
ಜಿಲ್ಲೆಯಲ್ಲಿ ಇಂದು 42 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ 1786 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು 575 ಜನರನ್ನ ಹೋಂ ಐಸೋಲೇಷನ್‌ನಲ್ಲಿದ್ದು, 456 ಸೋಂಕಿತರಿಗೆ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.