ಕರ್ನಾಟಕ

karnataka

ETV Bharat / state

ಹಾವೇರಿ ಜಿಲ್ಲೆಯಲ್ಲಿ 137 ಕೊರೊನಾ ಪಾಸಿಟಿವ್ ದೃಢ

ಹಾವೇರಿ ಜಿಲ್ಲೆಯ ಬುಧವಾರದ ಕೊರೊನಾ ವರದಿ ಹೀಗಿದೆ..

Haveri
ಹಾವೇರಿ

By

Published : Aug 19, 2020, 9:49 PM IST

ಹಾವೇರಿ:ಜಿಲ್ಲೆಯಲ್ಲಿ ಬುಧವಾರ 137 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಕುರಿತಂತೆ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,772 ಕ್ಕೇರಿದಂತಾಗಿದೆ.

ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಬುಧವಾರ 29 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಹಾವೇರಿ ತಾಲೂಕಿನಲ್ಲಿ 43, ರಾಣೆಬೆನ್ನೂರು 29, ಶಿಗ್ಗಾವಿ 22 ಜನರಿಗೆ ಕೊರೊನಾ ದೃಢಪಟ್ಟಿದೆ. ಬ್ಯಾಡಗಿ ತಾಲೂಕಿನಲ್ಲಿ 13, ಹಾನಗಲ್ 04 ಹಿರೇಕೆರೂರು 10, ಸವಣೂರು 15 ಹಾಗೂ ಇತರೆ ಓರ್ವರಿಗೆ ಕೊರೊನಾ ಸೋಂಕು ತಗುಲಿದೆ.

ಹಾವೇರಿ ಜಿಲ್ಲೆಯಲ್ಲಿ ಬುಧವಾರ 137 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯಲ್ಲಿ ಕೊರೊನಾದಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾದಿಂದ ಮೃತರಾದವರ ಸಂಖ್ಯೆ 62 ಕ್ಕೇರಿದೆ. 531 ಜನರನ್ನು ಹೋಂ ಐಸೊಲೇಷನ್‌ನಲ್ಲಿಯೂ, 435 ಜನರಿಗೆ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣನವರ್ ತಿಳಿಸಿದ್ದಾರೆ.

ABOUT THE AUTHOR

...view details