ಹಾವೇರಿ: ಜಿಲ್ಲೆಯಲ್ಲಿ ಸೋಮವಾರ 150 ಜನರಿಗೆ ಕೊರೊನಾ ವಕ್ಕರಿಸಿದ್ದರೆ, 6 ಜನರು ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿಂದು 150 ಜನರಿಗೆ ಕೊರೊನಾ: ಮಹಾಮಾರಿಗೆ 6 ಮಂದಿ ಬಲಿ - ಹಾವೇರಿ ಕೊರೊನಾ ನ್ಯೂಸ್
ಹಾವೇರಿ ಜಿಲ್ಲೆಯಲ್ಲಿ ಇಂದು 150 ಮಂದಿಗೆ ಕೊರೊನಾ ಸೋಂಕು ತಗುಲಿದ್ದರೆ, 6 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,549 ಕ್ಕೇರಿದೆ.
ಈ ಕುರಿತಂತೆ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 3,549 ಕ್ಕೇರಿದಂತಾಗಿದೆ. ಹಾವೇರಿ ತಾಲೂಕಿನಲ್ಲಿ 79, ಹಾನಗಲ್ ತಾಲೂಕಿನಲ್ಲಿ 13, ಸವಣೂರು ತಾಲೂಕಿನಲ್ಲಿ ಮೂವರಿಗೆ ಕೊರೊನಾ ದೃಢಪಟ್ಟಿದೆ. ರಾಣೆಬೆನ್ನೂರು ತಾಲೂಕಿನಲ್ಲಿ 29, ಹಿರೇಕೆರೂರು ಹಾಗೂ ಬ್ಯಾಡಗಿ ತಾಲೂಕಿನಲ್ಲಿ ತಲಾ 9, ಶಿಗ್ಗಾಂವಿ ತಾಲೂಕಿನಲ್ಲಿ 8 ಜನರಿಗೆ ಕೊರೊನಾ ತಗುಲಿದೆ.
ಜಿಲ್ಲೆಯಲ್ಲಿ ಇಂದು ಕೊರೊನಾಗೆ 6 ಮಂದಿ ಮೃತಪಟ್ಟಿರುವುದಾಗಿ ಜಿಲ್ಲಾಡಳಿತ ದೃಢಪಡಿಸಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 80ಕ್ಕೇರಿದಂತಾಗಿದೆ. ಸೋಮವಾರ ವಿವಿಧ ಕೋವಿಡ್ ಆಸ್ಪತ್ರೆಗಳಿಂದ 221 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 772 ಜನ ಹೋಂ ಐಸೋಲೇಷನ್ನಲ್ಲಿ ಹಾಗೂ 520 ಜನ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.