ಹಾವೇರಿ:ಹಾವೇರಿ ಜಿಲ್ಲೆಯ ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಣೆಬೆನ್ನೂರಿನ ಓರ್ವ ವ್ಯಕ್ತಿ ಮತ್ತು ಹಾವೇರಿ ತಾಲೂಕಿನ ಗುತ್ತಲದ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ರಾಣೆಬೆನ್ನೂರಿನ 55 ವರ್ಷದ ವ್ಯಕ್ತಿಯನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 70 ವರ್ಷದ ಗುತ್ತಲ ಪಟ್ಟಣದ ಸೋಂಕಿತನನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು.
ರಾಣೆಬೆನ್ನೂರು ಸೋಂಕಿತನ ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 48 ಜನರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ ಇಬ್ಬರು ವಾಸವಿದ್ದ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಹಾವೇರಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ತಿಳಿಸಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.