ಹಾವೇರಿ: ನಗರದ ಗುತ್ತಲ ರಸ್ತೆಯಲ್ಲಿರುವ ಎಪಿಎಂಸಿ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 245 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ.
ಅಕ್ರಮವಾಗಿ ಸಂಗ್ರಹಿಸಿದ್ದ 245 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ - ಅಕ್ರಮ ಪಡಿತರ ಅಕ್ಕಿ
ಹಾವೇರಿಯ ಉಮೇಶ ಮಳೀಮಠ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 3,67,000 ರೂ. ಮೌಲ್ಯದ 245 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ.
ಅಕ್ಕಿಯ ಜಪ್ತಿ
ಉಮೇಶ ಮಳೀಮಠ ಎಂಬುವರಿಗೆ ಸೇರಿದ ಗೋದಾಮು ಎಂದು ಗುರುತಿಸಲಾಗಿದ್ದು, 3,67,000 ರೂ. ಮೌಲ್ಯದ ಅಕ್ಕಿ ವಶ ಪರಿಸಿಕೊಳ್ಳಲಾಗಿದೆ. ಹೆಚ್ಚಿನ ಧರಕ್ಕೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಅಕ್ಕಿ ಸಂಗ್ರಹ ಮಾಡಿಟ್ಟಿದ್ದರು ಎನ್ನಲಾಗಿದೆ.
ತಹಶೀಲ್ದಾರ್ ಶಂಕರ್ ಹಾಗೂ ಆಹಾರ ಇಲಾಖೆ ಅಧಿಕಾರಿ ನಾಗರಾಜ ಕನವಳ್ಳಿ ಜಂಟಿಯಾಗಿ ದಾಳಿ ನಡೆಸಿದ್ದಾರೆ. ಈ ಸಂಬಂಧ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.